ಬೆಂಗಳೂರು : ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಕೆನರಾ ಬ್ಯಾಂಕ್ ರೈತರಿಗೆ ಸುಲಭವಾಗಿ ಸಾಲ ದೊರೆಯುವಂತೆ ಮಾಡಲು ಕೃಷಿ ಸಾಲ ಕೇಂದ್ರಗಳನ್ನು ಆರಂಭಿಸಿದೆ.
ಕರ್ನಾಟಕ, ಉತ್ತರ ಪ್ರದೇಶ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಹರಿಯಾಣ ರಾಜ್ಯಗಳ ತಲಾ ಒಂದೊಂದು ಶಾಖೆಗಳಲ್ಲಿ ಕೃಷಿ ಸಾಲ ಕೇಂದ್ರಗಳನ್ನು ಕೆನರಾ ಬ್ಯಾಂಕ್ ತೆರೆದಿದೆ. ಕರ್ನಾಟಕದಲ್ಲಿ ತುಮಕೂರಿನ ಬಿ.ಎಚ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಆರ್ ಎಎಚ್ ಶಾಖೆಯಲ್ಲಿ ಕೃಷಿ ಸಾಲ ಕೇಂದ್ರವನ್ನು ಆರಂಭಿಸಲಾಗಿದೆ.
ಬ್ಯಾಂಕುಗಳಲ್ಲಿ ಕೃಷಿ ಸಾಲ ನೀಡುವುದು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಕೆನರಾ ಬ್ಯಾಂಕ್ ಕೃಷಿ ಸಾಲ ಕೇಂದ್ರ ಗಳನ್ನು ಆರಂಭಿಸಿದೆ ಎಂದು ತಿಳಿಸಲಾಗಿದೆ. ಈ ಕೇಂದ್ರಗಳಲ್ಲಿ ವ್ಯವಸ್ಥಾಪಕರು ಸೇರಿದಂತೆ 5-6 ಮಂದಿ ಕೃಷಿ ಅಧಿಕಾರಿಗಳು ಇರಲಿದ್ದಾರೆ., ಕೃಷಿ ಸಾಲಕ್ಕೆ ಸಂಬಂಧಿಸಿದ ಕಾರ್ಯಕ್ಕೆ ಇವರು ಸಂಬಂಧಿಸಿದವರಾಗಿರುತ್ತಾರೆ. ಹೀಗಾಗಿ ರೈತರಿಗೆ ಸಾಲ ನೀಡುವ ಪ್ರಕ್ರಿಯೆ ವೇಗ ಪಡೆದುಕೊಳ್ಳಲಿದೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ