ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಬಹಳ ದಿನಗಳ ನಂತರ 650 ಗಡಿ ದಾಟಿದೆ.ಒಟ್ಟು ೬೭೭ ಜನರಿಗೆ ಕೊರೊನಾ ಸೋಂಕು ತಗಲಿದೆ.
ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ ಐನೂರರ ಹತ್ತಿರ ಬಂದಿದೆ.
ಕಳೆದ ಕೆಲ ತಿಂಗಳಿಂದ ಇಳಿಕೆಯಾಗಿದ್ದ ಸೋಂಕು ಪ್ರಕರಣಗಳು ಐದಾರು ದಿನಗಳಿಂದ ಏರಿಕೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 4 ಮಂದಿ ಕೊರೊನಾದಿಂದ ಮೃತಪಟ್ಟಿದ್ದು ಬೆಂಗಳೂರು ನಗರದಲ್ಲಿ ಇಬ್ಬರು, ಬೀದರ್ ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ ಒಬ್ಬ ಸೋಂಕಿತರು ಮೃತಪಟ್ಟಿದ್ದಾರೆ. 427 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೆಯೇ 04 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು 6374 ಸಕ್ರಿಯ ಸೋಂಕು ಪ್ರಕರಣಗಳಿವೆ. 112 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 444 ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದೆ.
ನಿಮ್ಮ ಕಾಮೆಂಟ್ ಬರೆಯಿರಿ