ಜಾರಕಿಹೊಳಿ ಸಿಡಿ ಸ್ಫೋಟದ ನಂತರ ಕೋರ್ಟ್‌ ಮೊರೆ ಹೋದ ಆರು ಸಚಿವರು!

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಸಿಡಿ ಬಿಡುಗಡೆ ಆಗುತ್ತಿದ್ದಂತೆಯೆ ಆರು ಜನ ಸಚಿವರು ಕೋರ್ಟ್‌ ಮೊರೆ ಹೋಗಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಪುಟದ ಆರು ಸಚಿವರು ತಮ್ಮ ವಿರುದ್ಧ ಮಾಧ್ಯಮಗಳು ವರದಿ ಪ್ರಸಾರ ಮಾಡದಂತೆ
ತಡೆ ಕೋರಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ತಮ್ಮ ಕುರಿತಾಗಿ ಯಾವುದೇ ಅವಹೇಳನಕಾರಿ ವಿಚಾರಗಳನ್ನು ಪ್ರಸಾರ ಮಾಡದಂತೆಯೂ ಮಾಧ್ಯಮಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿದ್ದಾರೆ.
ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ಗೆ ಆರು ಸಚಿವರು ಅರ್ಜಿ ಸಲ್ಲಿಸಿದ್ದು ಈ ಕುರಿತು ಮಧ್ಯಂತರ ಆದೇಶ ಮಾಡುವಂತೆ ಕೋರಿದ್ದಾರೆ. ಮಾ.೬ರಂದು ಅರ್ಜಿ ವಿಚಾರಣೆ ನಡೆಯಲಿದ್ದು, ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ. ಪಾಟೀಲ್, ಹೆಚ್.ಟಿ. ಸೋಮಶೇಖರ್, ಡಾ. ಕೆ. ಸುಧಾಕರ್, ಡಾ. ಕೆ.ಸಿ. ನಾರಾಯಣಗೌಡ ಹಾಗೂ ಭೈರತಿ ಬಸವರಾಜ್ ಅವರು ಕೋರ್ಟ್‌ ಮೊರೆ ಹೋದ ಸಚಿವರು.
ಇದೀಗ ಈ ಆರು ಸಚಿವರಿಗೆ ಭೀತಿ ಹುಟ್ಟಿರುವುದು ಯಾಕೆ ಎಂಬ ಚರ್ಚೆ ಇದೀಗ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿದೆ.

ಶೇರ್ ಮಾಡಿ :

  1. geek

    ಆ ಎಲ್ಲಾ ಸಚಿವರು ತಮ್ಮನ್ನು ತಾವು ಹಣ ಮತ್ತು ಹೆಣ್ಣಿನ ಆಮಿಷಕ್ಕೆ ಮಾರಿಕೊಂಡವರು. ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಳ್ಳುವ ಗಾದೆ ನೆನಪಾಗುತ್ತದೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement