ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದ ಮಾಹಿತಿಯಿದೆ: ಎಚ್‌ಡಿಕೆ ಬಾಂಬ್‌…!

ಮೈಸೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬಾಂಬ್‌ ಸಿಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೂರು ತಿಂಗಳಿಂದ ಈ‌ ಡೀಲ್ ವ್ಯವಹಾರ ನಡೆದಿದೆ. ದೊಡ್ಡ ದೊಡ್ಡವರೇ ಈ ಪ್ರಕರಣದಲ್ಲಿ ಇದ್ದಾರೆ. ಇದನ್ನ ತನಿಖೆ ಮಾಡಿಸುವ ಜವಾಬ್ದಾರಿ ಸರ್ಕಾರದ್ದು. ನಾನು ಈ ಪ್ರಕರಣ ನೋಡಿ ಖುಷಿ ಪಡುವವನಲ್ಲ. ಸರ್ಕಾರ ಬೀಳಿಸಿದರು ಎನ್ನುವ ಕಾರಣಕ್ಕೆ ನಾನು ಒಂದು ಕಲ್ಲು ಹೊಡೆಯಬೇಕು ಎಂದು ಹೊಡೆವವ ನಾನಲ್ಲ ಎಂದು ಹೇಳಿದರು.
ಕೆಲವರಂತೂ ನನ್ನ ಸಿಡಿ ಇದೆ ಎಂದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಯಾರೇ ಆದರೂ ಇಂಥವಕ್ಕೆ ಪುಷ್ಠಿ ಕೊಟ್ಟು ಬೆಳೆಸುವುದು ಬೇಡ. ಅದ್ಯಾರೋ ಒಬ್ಬರು ಮಾಜಿ ಸಿಎಂ ಅದೆಲ್ಲೋ ಹೋಗಿ ಬರುತ್ತಾರೆ. ಅದರ ಸಿಡಿ ನನ್ನ ಬಳಿ ಇದೆ ಎಂದು ಹೇಳುತ್ತಾರೆ ಇದೆಲ್ಲ ಏನೂ? ರಾಜ್ಯದಲ್ಲಿ ದೇವೇಗೌಡ, ಎಸ್‌ಎಂ ಕೃಷ್ಣ ಆದಿಯಾಗಿ ತುಂಬಾ ಜನ ಮಅಜಿ ಮುಖ್ಯಮಂತ್ರಿಗಳಿದ್ದಾರೆ. ಯಾರು ಆ ಮಾಜಿ ಮುಖ್ಯಮಂತ್ರಿ ಎಂದು ಬಾಯಿ ಬಿಡಿಸಿ. ಸುಮ್ಮನೆ ನಾವು ಹೊರಗೆ ಓಡಾಡುವಾಗ ಮುಜುಗರ ತರುವುದು ಬೇಡ ಎಂದು ಹೇಳಿದ್ದಾರೆ.
ರಾಜಕಾರಣಿಗಳ ಸಿಡಿ ನನ್ನ ಬಳಿ ಇದೆ ಎಂದು ಹೇಳಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿರುವವರನ್ನು ಒದ್ದು ಎರೋಪ್ಲೇನ್ ಹತ್ತಿಸಬೇಕು. ಅವರನ್ನ ಬಂಧಿಸಿ ಅವರ ಬಳಿ ಇರುವ ಸಿಡಿಗಳನ್ನ ಸರ್ಕಾರವೇ ಜನರ ಮುಂದೆ ಬಿಡುಗಡೆ ಮಾಡಲಿ ಎಂದು ಕುಮಾರಸ್ವಾಮಿ ಒತ್ತಾಯಿಸಿದರು.

ಪ್ರಮುಖ ಸುದ್ದಿ :-   ಗೋಪಾಲಕೃಷ್ಣ ಭಟ್ಟ ನಿಧನ

ಹಿಂದೆ ಅದ್ಯಾವುದೋ ಆಂಕರ್ ವಿಚಾರದಲ್ಲೂ ನನ್ನ ಹೆಸರು ತಂದರು. ಆಗಲು ಸರಿಯಾಗಿ ಜಾಡಿಸಿದ್ದೇ‌ನೆ. ನನಗೆ ಈ ವಿಚಾರದಲ್ಲಿ ಯಾವುದೇ ಭಯವು ಇಲ್ಲ. ಈ ಪ್ರಕರಣದಲ್ಲಿ ನಾನು ತುಂಭಾ ಕ್ಲೀನ್ ಆಗಿದ್ದೇನೆ. ಆದರೆ ನನ್ನ ಉದ್ದೇಶ ಇಂತಹ ಬ್ಲ್ಯಾಕ್ ಮೇಲ್‌ಗಳು ನಿಲ್ಲಬೇಕು. ಇಂತಹ ಪ್ರಕರಣಗಳು ಹೇಸಿಗೆ ಬರುವಂತ ಸ್ಥಿತಿ ನಿರ್ಮಾಣ ಮಾಡಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದರು.

Dailyhunt

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement