53 ಲಕ್ಷ ರೂ. ಹಿಂದಿರುಗಿಸಲು ಹೈಕೋರ್ಟ್‌ ಸೂಚನೆ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪದ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಪ್ತ ಸಚಿನ್‌ ನಾರಾಯಣ್‌ ಮನೆ ಮತ್ತವರ ಕಂಪನಿ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದ 53 ಲಕ್ಷ ರೂ. ಹಣ ಬಿಡುಗಡೆ ಮಾಡುವಂತೆ ಸಿಬಿಐಗೆ ಹೈಕೋರ್ಟ್‌ ಸೂಚಿಸಿದೆ.
ಡಿ.ಕೆ.ಶಿವಕುಮಾರ್‌ ದೆಹಲಿಯ ಫ್ಲಾಟ್‌ ಹಾಗೂ ಮನೆಯಲ್ಲಿ 2017ರಲ್ಲಿ ಏಳುಕೋಟಿ ರೂಪಾಯಿಗೂ ಅಧಿಕ ನಗದು ದೊರೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಆಪ್ತರಾದ ಸಚಿನ್‌ ನಾರಾಯಣ್‌ ಮತ್ತು ವೆಲ್‌ವರ್ತ್‌ ಸಾಫ್ಟ್ವೇರ್‌ ಪ್ರೈ.ಲಿ.ಕಚೇರಿ ಮೇಲೆ ದಾಳಿ ನಡೆಸಿ 53 ಲಕ್ಷ ರೂ.ಜಪ್ತಿ ಮಾಡಲಾಗಿತ್ತು. ಆ ಹಣ ಬಿಡುಗಡೆಗೆ ಸಿಬಿಐಗೆ ನಿರ್ದೇಶಿಸುವಂತೆ ಕೋರಿ ಸಚಿನ್‌ ನಾರಾಯಣ್‌ ಮತ್ತು ಅವರ ಕಂಪನಿ ಪ್ರತ್ಯೇಕವಾಗಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್‌ ಮೈಕೆಲ್‌ ಕುನ್ಹಾ ಅವರ ಏಕಸದಸ್ಯ ನ್ಯಾಯಪೀಠ ಈ ಸೂಚನೆ ನೀಡಿದೆ.
ವಾದ-ಪ್ರತಿವಾದ ಆಲಿಸಿದ ಕೋರ್ಟ್‌, ಸಿಬಿಐ ಜಪ್ತಿ ಮಾಡಿದ ಹಣ ಅರ್ಜಿದಾರರಿಗೆ ಸೇರಿದೆ ಎಂಬುದು ದಾಖಲೆಗಳಿಂದ ಮೇಲ್ನೋಟಕ್ಕೆ ತಿಳಿದು ಬರುತ್ತಿದೆ. ಅರ್ಜಿದಾರ ಕಂಪನಿಯ ವಹಿವಾಟಿಗೆ ತೊಂದರೆ ಉಂಟಾಗುತ್ತಿರುವ ಕಾರಣ ಹಣ ಬಿಡುಗಡೆ ಮಾಡಬಹುದು. ಆದರೆ,ಅದರ ಮೂಲದ ಬಗ್ಗೆ ಸಿಬಿಐ ತನಿಖೆ ಮುಂದುವರಿಸಬಹುದು ಎಂದು ನಿರ್ದೇಶಿಸಿತು.

ಪ್ರಮುಖ ಸುದ್ದಿ :-   ಆರೋಗ್ಯದಲ್ಲಿ ಏರುಪೇರು : ಸಚಿವ ಜಮೀರ್‌ ಅಹ್ಮದ್‌ ಆಸ್ಪತ್ರೆಗೆ ದಾಖಲು

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement