ಅಂಬಾನಿ ಮನೆ ಮುಂದೆ ಸ್ಫೋಟಕ ತುಂಬಿದ್ದ ಕಾರು ಪತ್ತೆ ಪ್ರಕರಣ: ಕಾರು ಮಾಲೀಕ ಶವವಾಗಿ ಪತ್ತೆ

ಮುಂಬೈ: ಏಶಿಯಾದ ಅಗರ್ಭ ಶ್ರೀಮಂತ ಮುಕೇಶ್ ಅಂಬಾನಿ ಅವರ ಮನೆ ಮುಂದೆ ಸ್ಫೋಟಕ ತುಂಬಿದ್ದ ಕಾರು ಪತ್ತೆಯಾಗಿ ಆತಂಕ ಸೃಷ್ಟಿಸಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು ಕಾರಿನ ಮಾಲೀಕನ ಶವ ಪತ್ತೆಯಾಗಿದೆ.
ಪ್ರಕರಣ ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ತನಿಖೆ ಕೈಗೊಂಡಿದ್ದರು. ತನಿಖೆ ವೇಳೆ ಕಾರು ಮಾಲೀಕ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಕಾರು ಮಾಲೀಕ ಮನ್ಸುಕ ಹಿರೆನ್ ಶವ ಥಾಣೆಯ ರೈಲ್ವೇ ಕ್ರಿಕ್ ಬಳಿ ಪತ್ತೆಯಾಗಿದೆ. ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಜಿಲೆಟಿನ್ ಕಡ್ಡಿಗಳನ್ನು ತುಂಬಿದ್ದ ಸ್ಕಾರ್ಪಿಯೋ ಕಾರನ್ನು ಮುಕೇಶ್ ಅಂಬಾನಿ ಮನೆ ಮುಂದೆ ನಿಲ್ಲಿಸಲಾಗಿತ್ತು. ಆದರೆ ಪೊಲೀಸರು ಕಾರನ್ನು ಪತ್ತೆ ಹಚ್ಚಿ ದೊಡ್ಡ ಅನಾಹುತ ತಪ್ಪಿಸಿದ್ದರು. ಜೈಶ್ ಉಲ್ ಹಿಂದ್ ಉಗ್ರ ಸಂಘಟನೆ ಇದರ ಹೊಣೆ ಹೊತ್ತುಕೊಂಡಿದ್ದು ಪತ್ರವೊಂದನ್ನು ಪ್ರಕಟಿಸಿರುವುದಾಗಿ ವರದಿಯಾಗಿತ್ತು. ಇದರ ಬೆನ್ನತ್ತಿದ ಪೊಲೀಸರಿಗೆ ತನಿಖೆ ವೇಳೆ ಸಂಘಟನೆಯ ಪತ್ರವೇ ನಕಲಿ ಎಂದು ಗೊತ್ತಾಗಿತ್ತು. ಈಗ ಕಅರಿನ ಮಾಲೀಕನ ಶವ ಪತ್ತೆಯಾಗಿರುವುದು ಪ್ರಕರಣ ಮತ್ತೆ ತಿರುವು ಪಡೆದುಕೊಂಡಿದೆ.

ಪ್ರಮುಖ ಸುದ್ದಿ :-   ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ ಪ್ರಮಾಣ ವಚನ, 13 ಸಚಿವರಿಂದಲೂ ಪ್ರಮಾಣವಚನ ಸ್ವೀಕಾರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement