ಮಾ.8ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ರಾಜ್ಯ ಬಜೆಟ್ ಕುರಿತು ಚರ್ಚಿಸುವುದು ಹಾಗೂ ಪ್ರಸ್ತುತ ರಾಜಕೀಯ ವಿಷಯಗಳ ಬಗ್ಗೆ ಸಮಾಲೋಚಿಸಲು ಮಾ.8ರಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ.
.ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಖಾಸಗಿ ಹೊಟೇಲ್‍ನಲ್ಲಿ ನಡೆಯಲಿದ್ದು, ಬಜೆಟ್ ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿ ಹಾಕಲು ರಣತಂತ್ರ ರೂಪಿಸಲಾಗುತ್ತಿದೆ.
ಭದ್ರಾವತಿ ಕ್ಷೇತ್ರದ ಶಾಸಕ ಬಿ.ಕೆ.ಸಂಗಮೇಶ್ ಅವರ ಕುಟುಂಬದ ಮೇಲೆ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ಚರ್ಚೆ ಕೂಡ ಸಾಕಷ್ಟು ಸಮಯ ನುಂಗಿ ಹಾಕಿದ್ದು , ಮಾ.೮ರಂದು ಬೆಳಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಬಜೆಟ್ ಮಂಡಿಸಲಿದ್ದಾರೆ.
ಅದರಲ್ಲಿರುವ ಕಾರ್ಯಕ್ರಮಗಳು, ಯೋಜನೆಗಳನ್ನು ಆಧರಿಸಿ ಮುಂದಿನ ಹಂತದಲ್ಲಿ ಚರ್ಚೆ ಮಾಡಲು ಕೂಡ ನಿರ್ಧರಿಸಲಾಗಿದೆ.ಈ ನಡುವೆ ರಾಜಕೀಯವಾಗಿ ಸಾಕಷ್ಟು ವಿಷಯಗಳು ಪ್ರತಿಪಕ್ಷಗಳಿಗೆ ಅಸ್ತ್ರ ಕೊಟ್ಟಿವೆ. ಹೀಗಾಗಿ ಚರ್ಚೆಯ ಹಾದಿ ತಪ್ಪದಂತೆ ಎಚ್ಚರಿಕೆ ವಹಿಸಲು ಕಾಂಗ್ರೆಸ್ ನಾಯಕರು ಮುಂಜಾಗ್ರತೆ ವಹಿಸಿದ್ದಾರೆ. ಇತ್ತೀಚೆಗೆ ನಡೆದಂತಹ ಚಿಕ್ಕಬಳ್ಳಾಪುರ ಹಾಗೂ ಶಿವಮೊಗ್ಗ ಜಿಲ್ಲೆಗಳ ಕಲ್ಲು ಕ್ವಾರಿ ಸೋಟ ಪ್ರಕರಣಗಳಂತೂ ಭಾರೀ ಗದ್ದಲವನ್ನೇ ಸೃಷ್ಟಿಸುವ ಸಾಧ್ಯತೆ ಇದೆ. ಮೀಸಲಾತಿ ಹೋರಾಟಗಳು ಕೂಡ ಚರ್ಚೆಯಾಗಬಹುದಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement