ಶಸ್ತ್ರ ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿರುವ ಸಂಸದ ಹೆಗಡೆ

ಕಾರವಾರ: ಉತ್ತರ ಕನ್ನಡ ಕ್ಷೇತ್ರದ ಸಂಸದ, ಕೇಂದ್ರದ ಮಾಜಿ ಸಚಿವ ಅನಂತಕುಮಾರ ಹೆಗಡೆ ಹಲವು ವರ್ಷಗಳಿಂದ ತೀವ್ರವಾದ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿರುವ ಸಂಸದರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
ಅನಂತಕುಮಾರ್ ಹೆಗಡೆ ಆರೋಗ್ಯದ ಬಗ್ಗೆ ಆಪ್ತ ಸಹಾಯಕರು ಪ್ರಕಟಣೆ ಬಿಡುಗಡೆ ಮಾಡಿದ್ದು, ಕೆಲವು ತಿಂಗಳುಗಳಿಂದ ಬೆನ್ನು ನೋವು ಮತ್ತು ಕಾಲು ನೋವು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ತಜ್ಞರು ತಕ್ಷಣವೇ ಕಾಲಿನ ಶಸ್ತ್ರ ಚಿಕಿತ್ಸೆಯನ್ನು ನಡೆಸುವ ಅವಶ್ಯಕತೆ ಇದೆ ಎಂದು ಹೇಳಿದ್ದರು.
ಕೆಲವು ದಿನಗಳ ಹಿಂದೆ ನಡೆಸಿದ ಗಂಭೀರ ಶಸ್ತ್ರ ಚಿಕಿತ್ಸೆಯ ನಂತರ ಸಂಸದರು ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರು ದೀರ್ಘಾವಧಿ ವಿಶ್ರಾಂತಿ ಪಡೆಯುಲು ಸೂಚಿಸಿರುವ ಹಿನ್ನಲೆಯಲ್ಲಿ ಪೂರ್ಣವಾಗಿ ಗುಣಮುಖರಾಗುವ ತನಕ ಸಂಸದರು ಸಾರ್ವಜನಿಕ ಕಾರ್ಯಕ್ರಮ ಹಾಗೂ ಭೇಟಿಗೆ ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.
ಅನಂತಕುಮಾರ ಹೆಗಡೆ ಕಳೆದ ಹಲವು ವರ್ಷಗಳಿಂದ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿದ್ದು, ಇದೇ ಕಾರಣದಿಂದಾಗಿ ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ನಿವೃತ್ತಿ ಬಗ್ಗೆ ತಮ್ಮ ನಿರ್ಧಾರ ವ್ಯಕ್ತಪಡಿಸಿದ್ದರು. ಲೋಕಸಭಾ ಚುನಾವಣೆ ನಂತರದಿಂದ ಹೆಚ್ಚಿನ ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಸಂಪರ್ಕದಿಂದ ದೂರವಿರುತ್ತಿದ್ದರು ಎಂದು ಕೂಡ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಮುಖ ಸುದ್ದಿ :-   ಆರ್‌ಎಸ್‌ಎಸ್‌ ನೋಂದಣಿ- ಕಾನೂನುಬದ್ಧ ಸ್ಥಿತಿಗತಿಯ ಬಗ್ಗೆ ಸ್ಪಷ್ಟನೆ ಕೋರಿ ಮುಖ್ಯಸ್ಥ ಮೋಹನ ಭಾಗವತ್‌ಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ

 

 

2.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement