ಬೆಂಗಳೂರು: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕಣ್ಣಿನಲ್ಲಿ ನೋಡಲಾಗದ ಸಿಡಿ ಎಂದು ಹೇಳಿದ್ದಾರೆ. ಅದರ ವಿರುದ್ಧ ನೀವು ತಡೆಯಾಜ್ಞೆ ತರುವುದಿಲ್ಲವೇ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಾಂಗ್ರೆಸ್ ಲೇವಡಿ ಮಾಡಿದೆ.
ಟ್ವಿಟರ್‌ನಲ್ಲಿ ಕಾಂಗ್ರೆಸ್ ಈ ವಿಷಯದಲ್ಲಿ ಬಿಜೆಪಿಯ ವಿರುದ್ಧ ವಾಗದಾಳಿ ನಡೆಸಿದ್ದು, ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿದೆ. ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯ ಸಚಿವರು ಏಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ ಎಂದು ಪ್ರಶ್ನಿಸಿರುವ ಕಾಂಗ್ರೆಸ್, ಸಿಡಿ ಶಬ್ದ ಕೇಳಿದರೆ ಸಾಕು ಬಿಜೆಪಿ ಸರ್ಕಾರದ ಇಡೀ ಸಂಪುಟವೇ ಏಕೆ ಬೆಚ್ಚಿಬೀಳುತ್ತಿದೆ ? ಆರು ಸಚಿವರು ಸುದ್ದಿ ಪ್ರಸಾರಕ್ಕೆ ಮುಂಜಾಗ್ರತೆಯಾಗಿ ತಡೆ ತರುತ್ತಿದ್ದಾರೆ ಏಕೆ ಎಂದು ವ್ಯಂಗ್ಯವಾಡಿದೆ.
ಬಿಜೆಪಿ ಸರ್ಕಾರದ ರಚನೆಯಾಗಿದ್ದೇ ಭ್ರಷ್ಟಾಚಾರದಿಂದ. ಸಂಪುಟ ವಿಸ್ತರಣೆಯ ವರೆಗೂ ಬೃಹತ್ ಹಗರಣ ನಡೆದಿದೆ. ಆಪರೇಷನ್ ಕಮಲ ಎನ್ನುವುದು ಬಿಜೆಪಿಯ ರಾಜಕೀಯ ವ್ಯಭಿಚಾರ ಎಂದು ವಾಗದಾಳಿ ನಡೆಸಿರುವ ಕಾಂಗ್ರೆಸ್ ಬೆದರಿಕೆ, ಹನಿಟ್ರ್ಯಾಪ್, ಬ್ಲಾಕ್‍ಮೇಲ್, ಸಾವಿರಾರು ಕೋಟಿ ಹಗರಣ, ಹೆಣ್ಣು, ಹೆಂಡ ಎಲ್ಲವನ್ನೂ ಉಪಯೋಗಿಸಿರುವುದು ದೃಢವಾಗುತ್ತಿದೆ. ಅಧಿಕಾರಕ್ಕಾಗಿ ಬಿಜೆಪಿ ಯಾವ ಮಟ್ಟಕ್ಕೂ ಇಳಿಯಬಲ್ಲದು ಎಂಬುದನ್ನು ಇದು ಸಾಬೀತು ಪಡಿಸುವಂತಿದೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ