ಸಿಡಿ ಹಗರಣದಲ್ಲಿ ಅನವಶ್ಯಕ ನನ್ನನ್ನು ಎಳೆದು ತರಬೇಡಿ

ಹುಬ್ಬಳ್ಳಿ: ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣ ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾದ ಬೆನ್ನಲ್ಲೇ ಈ ಪ್ರಕರಣದಲ್ಲಿ ತನ್ನ ಹೆಸರನ್ನು ಅನಗತ್ಯವಾಗಿ ತರಲಾಗುತ್ತಿದೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ನನ್ನ ಹೆಸರು ವಿನಾಕಾರಣ ಎಳೆದು ತರಲಾಗುತ್ತಿದೆ.ತಾನು ಈ ಬಗ್ಗೆ ಏನೂ ಮಾತನಾಡುವುದಿಲ್ಲ. ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕೆ ಬಳಿಕ ಸತ್ಯ ಏನೆಂಬುದು ಗೊತ್ತಾಗಲಿದೆ ಎಂದರು.
‘ಸಿಡಿ ವಿಚಾರದಲ್ಲಿ ನನ್ನ ಹೆಸರನ್ನು ಯಾಕೆ ಎಳೆದು ತರುತ್ತಿದ್ದಾರೆ ಎಂಬುದುನನಗೆ ಗೊತ್ತಿಲ್ಲ. ಇದಕ್ಕೂ ನನಗೂ ಸಂಬಂಧವೇ ಇಲ್ಲ. ಹೀಗಾಗಿ ಸಿಡಿ ವಿಚಾರದಲ್ಲಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.
ಗೋಕಾಕ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ರಮೇಶ್ ಜಾರಕಿಹೊಳಿ ಬೆಂಬಲಿಗರ ಗುಂಪು ತಮ್ಮ ವಿರುದ್ಧ ಘೋಷಣೆ ಕೂಗಿದ್ದರ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಇದು ನನಗೆ ಸಂಬಂಧಿಸದ ವಿಚಾರವಲ್ಲ ಎಂದು ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement