ನಮ್ಮ ತೇಜೋವಧೆಗೆ ಷಡ್ಯಂತ್ರ..ಹೀಗಾಗಿ ಕೋರ್ಟ್‌ ಮೊರೆ ಹೋಗುವ ನಿರ್ಧಾರ:ಸಚಿವ ಸುಧಾಕರ

ಬೆಂಗಳೂರು:ರಾಜ್ಯದಲ್ಲಿ ರಾಜಕೀಯ ಷಡ್ಯಂತ್ರ ನಡೆಯುತ್ತಿದ್ದು, ಮಾಧ್ಯಮಗಳನ್ನು ಬಳಸಿಕೊಂಡು ತೇಜೋವಧೆ ಮಾಡುವ ಕೆಲಸವಾಗುತ್ತಿದೆ. ಇದನ್ನು ತಡೆಯಲು ನಾವು ನ್ಯಾಯಾಲಯದ ಮೊರೆ ಹೋಗಿದ್ದೇವೆ ಎಂದು ಆರೋಗ್ಯ ಸಚಿವ ಸುಧಾಕರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾರಿತ್ರ್ಯ ಹರಣ ತಡೆಯಲು ಸುಳ್ಳು ಸುದ್ದಿ, ಅಪಪ್ರಚಾರ ನಿರ್ಬಂಧಕ್ಕೆ ಮನವಿ ಮಾಡಲಾಗಿದೆ. ಒಂದು ವೇಳೆ ವಿಷಯ ನಿಜವಾಗಿದ್ದರೆ ಕಾನೂನು ಹೋರಾಟ ಮಾಡಲಿ, ಆದರೆ ಹಿಟ್ ಅಂಡ್ ರನ್ ಮಾಡಿ ತೇಜೋವಧೆ ಮಾಡುವುದು ಬೇಡ ಎಂದು ಹೇಳಿದರು.
ಮೊದಲು ಮಾಧ್ಯಮಗಳಲ್ಲಿ ಎಲ್ಲವೂ ಬರುತ್ತದೆ. ಇದರಿಂದಾಗಿ ಅನೇಕ ವರ್ಷಗಳಿಂದ ಸಂಪಾದಿಸಿದ ಜನಪ್ರಿಯತೆ ಹೆಸರು, ಗೌರವ ಹಾಳಾಗಿ ಹೋಗುತ್ತದೆ. ಹೀಗಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಇದಕ್ಕೆ ತಡೆಹಾಕಲು ಬಲವಾದ ಕಾನೂನು ರೂಪಿಸಲು ಚಿಂತನೆ ನಡೆದಿದೆ ಎಂದರು.
ಬೇರೆ ಕ್ಷೇತ್ರಗಳಲ್ಲೂ ಈ ರೀತಿ ನಡೆಯುತ್ತದೆ. ಒಬ್ಬ ವ್ಯಕ್ತಿಯ ತೇಜೋವಧೆ ಮಾಡಲು ತಪ್ಪು ಮಾಹಿತಿ ನೀಡಿ, ಅದಕ್ಕಾಗಿ ಸಾಮಾಜಿಕ ಜಾಲತಾಣ, ಮಾಧ್ಯಮ ಬಳಸಿಕೊಳ್ಳಲಾಗುತ್ತಿದೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ತಪ್ಪು ಯಾರೇ ಮಾಡಿದ್ದರೂ ಅವರಿಗೆ ಶಿಕ್ಷಯಾಗಬೇಕು. ಆದರೆ ತೇಜೋವಧೆ ಮಾಡಬಾರದು. ಆರೋಪ ಮಾಡುವವರು ನೇರವಾಗಿ ನ್ಯಾಯಾಲಯಕ್ಕೆ ಹೋಗಬಹುದು. ಆದರೆ ಇಂತಹವರು ನ್ಯಾಯಾಲಯಕ್ಕೆ ಹೋಗದೆ ಬೇರೆ ಮಾರ್ಗ ಹಿಡಿದು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಇದು ಹೊಸ ಅನೈತಿಕ, ಮೌಲ್ಯರಹಿತ ಟ್ರೆಂಡ್ ಆಗಿದೆ ಎಂದರು.
ರಷ್ಯಾ, ದುಬೈನಿಂದ ವಿಡಿಯೋ ಹಾಕುವುದು, ಸಾಮಾಜಿಕ ಜಾಲತಾಣ ಬಳಸಿಕೊಳ್ಳುವುದನ್ನು ನೋಡಿದರೆ ಇದು ಷಡ್ಯಂತ್ರ ಎನಿಸುವುದಿಲ್ಲವೇ? ಸಾರ್ವಜನಿಕ ಬದುಕಿನಲ್ಲಿ ಹಲವಾರು ವರ್ಷಗಳಿಂದ ಇದ್ದವರಿಗೆ ಸಾಮಾಜಿಕ ಬದ್ಧತೆ, ಕಳಕಳಿ ಇರುತ್ತದೆ. ಯಾವುದೇ ಆರೋಪ ಬಂದಾಗ ಅದನ್ನು ಪರಾಮರ್ಶಿಸಬೇಕು. ನೈಜತೆ ಇದ್ದಲ್ಲಿ 24 ಗಂಟೆಯೂ ಸುದ್ದಿ ಪ್ರಸಾರ ಮಾಡಬಹುದು ಎಂದರು.
ಸಿಡಿ ಪ್ರಕರಣದಲ್ಲಿ ಅನ್ಯಾಯಕ್ಕೊಳಗಾದವರು ಇನ್ನೂ ಮುಖ್ಯವಾಹಿನಿಗೆ ಬಂದಿಲ್ಲ. ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದರು.ಶ್ವಾಸವಿದೆ ಎಂದು ಸುಧಾಕರ್ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement