ಮಾ.30ರ ವರೆಗೆ ‘6 ಸಚಿವರ ವಿರುದ್ಧ ಮಾನಹಾನಿ ವರದಿ ಪ್ರಸಾರಕ್ಕೆ ಕೋರ್ಟ್ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು : ತಮ್ಮ ವಿರುದ್ಧ ಮಾನಹಾನಿಯಾಗುವಂತಹ ಯಾವುದೇ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆ ಕೋರಿ ಆರು ಸಚಿವರು ಸಿಟಿ ಸಿವಿಲ್ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿ ಮಾನ್ಯ ಮಾಡಿದ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಮಾರ್ಚ್ 30ರ ವರೆಗೆ ಮಾನಹಾರಿ ವರದಿ ಪ್ರಸಾರಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ.
ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆಯ ನಂತರ ಹ ತಮ್ಮ ತೇಜೋವಧೆಗಾಗಿ ಷಡ್ಯಂತ್ರ ರೂಪಿಸಲಾಗಿದೆ ಎಂದು ಆರೋಪಿಸಿ ಆರು ಸಚಿವರು, ತಮ್ಮ ವಿರುದ್ಧದ ಯಾವುದೇ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗದಂತೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದರು.
ಶನಿವಾರ ಅರ್ಜಿ ಕುರಿತಂತೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ನ ಸಿಸಿಹೆಚ್-20ರ ನ್ಯಾಯಾಧೀಶರಾದ ಬಿ.ಎಸ್.ವಿಜಯಕುಮಾರ್ ಅರ್ಜಿ ಮಾನ್ಯಮಾಡಿ, ರಾಜ್ಯದ ಎಲ್ಲಾ ಮಾಧ್ಯಮಗಳಿಗೆ ಆರು ಸಚಿವರ ಬಗ್ಗೆ ಮಾನಹಾರಿ ವರದಿಯನ್ನು ಪ್ರಸಾರ ಮಾಡದಂತೆ ಮಧ್ಯಂತರ ತಡೆಯಾಜ್ಞೆ ನೀಡಿ, ತುರ್ತು ನೋಟಿಸ್ ಜಾರಿಗೊಳಿಸಿದ್ದಾರೆ. ಅರ್ಜಿಯ ವಿಚಾರಣೆ ಮಾರ್ಚ್ 30ಕ್ಕೆ ಮುಂದೂಡಿದ್ದಾರೆ.
ಸಚಿವರಾದ ಬಿ.ಸಿ.ಪಾಟೀಲ್, ಹೆಚ್. ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್, ನಾರಾಯಣಗೌಡ, ಡಾ.ಕೆ.ಸುಧಾಕರ್ ಹಾಗೂ ಭೈರತಿ ಬಸವರಾಜ್ ತಮ್ಮ ವಿರುದ್ಧದ ಮಾನಹಾನಿ ಸುದ್ದಿಗಳ ಪ್ರಸಾರವನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ತಡೆ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

 

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement