ಚಿಕ್ಕಬಳ್ಳಾಪುರ: ರಾಜ್ಯದ ನಾಲ್ಕು ಭಾಗಗಳಲ್ಲಿ ಕಿದ್ವಾಯಿ ಆಸ್ಪತ್ರೆಯ ಪ್ರಾದೇಶಿಕ ಕೇಂದ್ರಗಳನ್ನು ಆರಂಭಿಸುವ ಪ್ರಯತ್ನ ನಡೆದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ರೆಡ್ ಕ್ರಾಸ್ ಹಾಗೂ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಸಹಯೋಗದಲ್ಲಿ ಚಿಕ್ಕಬಳ್ಳಾಪುರದಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಿದ್ವಾಯಿ ಸಂಸ್ಥೆಯಲ್ಲಿ ಹೆಚ್ಚು ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದ ದೂರದ ಪ್ರದೇಶಗಳಿಂದಲೂ ಇಲ್ಲಿಗೆ ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಇದನ್ನು ತಪ್ಪಿಸಲು ರಾಜ್ಯದ ನಾಲ್ಕು ಭಾಗಗಳಲ್ಲಿ ಸಂಸ್ಥೆಯ ಕೇಂದ್ರಗಳನ್ನು ಆರಂಭಿಸಲು ಚಿಂತಿಸಲಾಗಿದೆ. ಮುಂಬೈ ಕರ್ನಾಟಕ, ಮಲೆನಾಡು ಭಾಗ, ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಕಿದ್ವಾಯಿ ಸಂಸ್ಥೆಯ ಪ್ರಾದೇಶಿಕ ಕೇಂದ್ರಗಳನ್ನು ಆರಂಭಿಸಲು ಮುಖ್ಯಮಂತ್ರಿಗಳಿಗೆ ಕೋರಲಾಗಿದೆ ಎಂದು ತಿಳಿಸಿದರು.


ನಿಮ್ಮ ಕಾಮೆಂಟ್ ಬರೆಯಿರಿ