ಹೋರಾಟಕ್ಕೆ ೧೦೦ನೇ ದಿನ: ರೈತರಿಂದ ಕರಾಳ ದಿನಾಚರಣೆ

ನವ ದೆಹಲಿ: ಕೇಂದ್ರ ಜಾರಿಗೆ ತಂದಿರುವ ಮೂರು ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ೧೦೦ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ರೈತರು ಕರಾಳ ದಿನ ಆಚರಿಸಿದರು. ಹಾಗೂ ಕುಂಡಲಿ- ಮನೇಸಾರ್ ಪಲ್ ವಾಲ್ ಎಕ್ಸ್‌ಪ್ರೆಸ್ ವೇ ಹೆದ್ದಾರಿಯಲ್ಲಿ ೫ ಗಂಟೆ ಹೆದ್ದಾರಿ ತಡೆ ನಡೆಸಲಾಯಿತು.ಅಲ್ಲದೆ, ರೈತರ ಹೋರಾಟ ೧೦೦ ದಿನ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲು ರೈತ ನಾಯಕರು ನಿರ್ಧರಿಸಲಾಯಿತು. ಕೇಂದ್ರ ಸರ್ಕಾರ ಎಲ್ಲಿಯತನಕ ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವುದಿಲ್ಲವೋ ಅಲ್ಲಿಯವರೆಗೆ ಹೋರಾಟ ಹಿಂಪಡೆಯುವುದಿಲ್ಲ ಎಂದು ರೈತರು ಸ್ಪಷ್ಟಪಡಿಸಿದ್ದಾರೆ. ೨೦೦ ಕ್ಕೂ ಅಧಿಕ ರೈತರ ಸಾವು: ಕೃಷಿ ಕಾಯ್ದೆ ವಿರೋಧಿಸಿ ಕಳೆದ ೧೦೦ ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು ಈ ಅವಧಿಯಲ್ಲಿ ೨೦೦ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ರೈತ ಮುಖಂಡರು ಹೇಳಿದ್ದಾರೆ.
ದೆಹಲಿಯ ಗಡಿಭಾಗದಲ್ಲಿ ರೈತರು ಚಳಿ-ಮಳೆ ಎನ್ನದೆ ಕಳೆದ ೧೦೦ ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ರೈತರ ಹೋರಾಟಕ್ಕೆ ಬೆಲೆ ನೀಡದೆ ಕಾಯ್ದೆ ಹಿಂದೆ ಪಡೆಯುವುದಿಲ್ಲ ಎಂದು ಹೇಳಿದೆ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ರೈತರ ಹೋರಾಟಕ್ಕೆ ೧೦೦ ದಿನ ತಲುಪಿರುವ ಹಿನ್ನೆಲೆಯಲ್ಲಿ ಹೋರಾಟವನ್ನು ಮೈಲುಗಲ್ಲಾಗಿ ರೂಪಿಸಲು ಕರಾಳ ದಿನ ಆಚರಿಸಲಾಯಿತು.ಈ ಸಂದರ್ಭದಲ್ಲಿ ಕುಂಡಲಿ- ಮನೇಸಾರ್ ಪಲ್ ವಾಲ್ ಎಕ್ಸ್‌ಪ್ರೆಸ್ ವೇ ಹೆದ್ದಾರಿಯಲ್ಲಿ ೫ ಗಂಟೆ ಹೆದ್ದಾರಿ ತಡೆ ನಡೆಸಿದರಲ್ಲದೆ.
ದೆಹಲಿಯ ಟಿಕ್ರಿ, ಸಿಂಘು, ಗಾಜಿಯಾಬಾದ್ ಸೇರಿದಂತೆ ವಿವಿಧ ಗಡಿಭಾಗಗಳಲ್ಲಿಯೂ ರೈತರು ರಸ್ತೆ ತಡೆ ನಡೆಸಿ ಕೇಂದ್ರದ ವಿರುದ್ಧ ತಮ್ಮ ಅಸಮಾದಾನ ಹೊರಹಾಕಿದರು.
ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ನವಂಬರ್ ೨೬ ರಿಂದ ರೈತರು ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಪ್ರತಿಭಟನಾ ನಿರತ ರೈತರ ನಾಯಕರೊಂದಿಗೆ ಕೇಂದ್ರ ಸರ್ಕಾರ ಇನ್ನೊಂದು ಸುತ್ತಿನ ಮಾತುಕತೆ ನಡೆಸಿತು ಆದರೂ ಯಾವುದೇ ಬೇಡಿಕೆಗಳನ್ನು ಈಡೇರಿಸಿದ ಹಿನ್ನೆಲೆಯಲ್ಲಿ ರೈತರು ಹೋರಾಟವನ್ನು ಮುಂದುವರಿಸಿದ್ದಾರೆ. ರೈತ ಹೋರಾಟದಲ್ಲಿ ಭಾರತೀಯ ಕಿಸಾನ್ ಯೂನಿಯನ್ ನ ರಾಕೇಶ್ ಟಿಕಾಯತ್ ಸೇರಿದಂತೆ ಅನೇಕ ಸಂಘಟನೆಗಳ ನಾಯಕರು ಮಂಚೂಣಿಯಲ್ಲಿದ್ದಾರೆ..

ಪ್ರಮುಖ ಸುದ್ದಿ :-   ಭಾರತೀಯ ನೌಕಾಪಡೆಯ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ದಿನೇಶ ತ್ರಿಪಾಠಿ ನೇಮಕ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement