ನನ್ನ ಬಳಿ ಯಾವುದೇ ಜನಪ್ರತಿನಿಧಿಗಳ ಸಿಡಿ ಇಲ್ಲ:ಮುಲಾಲಿ

posted in: ರಾಜ್ಯ | 0

ವಿಜಯಪುರ: ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಯಾವುದೇ ಸಿಡಿಗಳು ನನ್ನ ಬಳಿ ಇಲ್ಲ ಎಂದು ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿ ಹೇಳಿದ್ದಾರೆ.
ಭಾನುವಾರ ವಿಜಯಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸಿಡಿ ಹೊರಬಂದಿರುವಂತೆ ಇನ್ನೂ ಹಲವಾರು ಜನಪ್ರತಿನಿಧಿಗಳ ಇಂತಹ ಸಿಡಿಗಳು ಇರಬಹುದು ಎಂದು ಹೇಳಿಕೆ ನೀಡಿದ್ದೇನೆಯೇ ಹೊರತು ನನ್ನ ಬಳಿ ಸಿಡಿ ಎಂದು ಹೇಳಿಲ್ಲ. ಇದಿಷ್ಟಕ್ಕೇ ಅನೇಕ ಸಚಿವರು ನ್ಯಾಯಾಲಯಕ್ಕೆ ಹೋಗಿದ್ದಾರೆ ಎಂದು ತಿಳಿಸಿದರು.
ನನ್ನನ್ನು ಬಂಧಿಸಿ ವಿಚಾರಣೆ ನಡೆಸುವಂತೆ ಮಂಡ್ಯದ ಇಂದಿರಾ ಎಂಬುವವರು ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಶನಿವಾರ ರಾತ್ರಿ ನನಗೆ ಫೋನ್ ಮಾಡಿದ್ದರು. ಹಾಗೂ ಮಾರ್ಚ್ 8ರಂದು ವಿಚಾರಣೆಗೆ ಹಾಜರಾಗಲು ಹೇಳಿದರು.
ನನಗೆ ಪೂರ್ವ ನಿಗದಿತ ಕಾರ್ಯಕ್ರಮಗಳು ಇದ್ದವು. ಹೀಗಾಗಿ ಆ ದಿನ ವಿಚಾರಣೆಗೆ ಬರುವುದು ಕಷ್ಟ ಎಂದು ಅವರಿಗೆ ಹೇಳಿದ್ದೇನೆ. ಈ ಬಗ್ಗೆ ನಮ್ಮ ವಕೀಲರ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಹೇಳಿದರು.
ಇಂದಿರಾ ಎಂಬವರು ನನ್ನ ವಿರುದ್ಧ ದೂರು ದಾಖಲಿಸಿರುವುದರ ಹಿಂದೆ ಯಾರದ್ದೋ ಕುಮ್ಮಕ್ಕು ಇರುವಂತಿದೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗುವುದು.ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧಿಸಿದ್ದು, ಇದನ್ನು ಸಹಿಸದವರು ಇದರ ಹಿಂದಿರುವ ಸಾಧ್ಯತೆ ಇದೆ. ಮಾಜಿ ಮುಖ್ಯಮಂತ್ರಿಯೊಬ್ಬರ ಬಗ್ಗೆ ಈ ಹಿಂದೆ ನಾನು ಆರೋಪ ಮಾಡಿದ್ದೆ. ಅವರ ಕೈವಾಡವೂ ಇರಬಹುದು ಎಂಬ ಅನುಮಾನವಿದೆ ಎಂದರು. ‘

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಬ್ರಾಹ್ಮಣ ಸಮುದಾಯದ ಬಗ್ಗೆ ನನಗೆ ಗೌರವವಿದೆ, ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ಹಣ ನೀಡಿದ್ದೇನೆ: ಗೋಕರ್ಣದಲ್ಲಿ ಅರ್ಚಕರ ಪ್ರಶ್ನೆಗೆ ಸ್ಪಷ್ಟನೆ ನೀಡಿದ ಎಚ್‌ಡಿಕೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement