ಬಜೆಟ್‌ ಮಂಡನೆಗೆ ಕ್ಷಣಗಣನೆ:ಆರ್ಥಿಕ ಮುಗ್ಗಟ್ಟಿನಲ್ಲಿ ಬಿಎಸ್‌ವೈ ಲೆಕ್ಕದ ಬಗ್ಗೆ ಕುತೂಹಲ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್‌ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ೮ನೇ ಬಾರಿಗೆ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ.
ಕೊರೊನಾ ಸಂಕಷ್ಟ ಗಮನದಲ್ಲಿಟ್ಟುಕೊಂಡು ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ಬಜೆಟ್‌ ಮಂಡಿಸುವುದಾಗಿ ಯಡಿಯೂರಪ್ಪ ಹೇಳಿದ್ದಾರೆ.
ಸೋಮವಾರ (ಮಾ.೮) ವಿಧಾನಸಭೆಯಲ್ಲಿ ೧೨.೦೫ ನಿಮಿಷಕ್ಕೆ ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಲಿದ್ದಾರೆ. ಕೊರೊನಾ ಸಮಯದಲ್ಲಿ ನಿರೀಕ್ಷೆಗಳು ಹೆಚ್ಚಾಗಿವೆ. , ಎಫ್‌ಕೆಸಿಸಿಐ, ಸಣ್ಣ ಕೈಗಾರಿಕೆಗಳ ಸಂಘಟನೆಗಳು, ರೈತ ಮುಖಂಡರೊಂದಿಗೂ ಚರ್ಚೆ ನಡೆಸಿ ಅಭಿಪ್ರಾಯ ಸಂಗ್ರಹಿಸಿ ಉತ್ತಮ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿಗಳು ಅನೇಕ ಸಲ ಹೇಳಿದ್ದಾರೆ.
ಕೊರೊನಾದಿಂದ ಆರ್ಥಿಕ ಪರಿಸ್ಥಿತಿ ಈಗಷ್ಟೇ ಚೇತರಿಕೆಯತ್ತ ಸಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ಆರೋಗ್ಯ ವಲಯಕ್ಕೆ ಹೆಚ್ಚಿನ ಹಣ ಮೀಸಲಿಡುವ ನಿರೀಕ್ಷೆಯಿದೆ. ಮೂಲಭೂತ ಸೌಕರ್ಯ, ಶಿಕ್ಷಣ, ನೀರಾವರಿ ಹಾಗೂ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಿದ್ದಾರೆ.ಮಹಿಳೆಯರಿಗೆ ಬಜೆಟ್‌ನಲ್ಲಿ ಆದ್ಯತೆ ನೀಡುವುದಾಗಿ ಈ ಮೊದಲೇ ಅವರು ಹೇಳಿದ್ದಾರೆ.ಮುಖ್ಯವಾಗಿ ಅಸಂಘಟಿತ ವಲಯದ ಕಾರ್ಮಿಕರ ಬಗ್ಗೆ ಹೆಚ್ಚು ಗಮನ ಹರಿಸಬೇಕಿದೆ.
ಸಂಕಷ್ಟಕ್ಕೆ ಸಿಲುಕಿರುವ ಆರ್ಥಿಕ ಪರಿಸ್ಥಿತಿ ಸರಿದೂಗಿಸಲು ಹಾಗೂ ಸಂಪನ್ಮೂಲ ಕ್ರೂಢೀಕರಣಕ್ಕೆ ಯಾವ ಮಾನದಂಡ ಅನುಸರಿಸಲಿದ್ದಾರೆ ಎಂಬುದು ಮುಖಯ. ಆರ್ಥಿಕತೆಗೆ ಟಾನಿಕ್ ನೀಡಲು ಕೇಂದ್ರದಿಂದ ೮೯,೧೭೬ ಕೋಟಿ ರೂ. ಸಾಲ ಪಡೆಯಬಹುದಾಗಿದೆ. ಇಷ್ಟೊಂದು ದೊಡ್ಡ ಮೊತ್ತದ ಸಾಲ ಪಡೆದರೆ ಹಳೆಯ ಬಡ್ಡಿ ಹೊರೆಯ ಸವಾಲು ಯಡಿಯೂರಪ್ಪ ಅವರ ಮುಂದಿದೆ.ಆದರೆ, ಆರ್ಥಿಕ ಪರಿಸ್ಥಿತಿ ಸರಿದಾರಿಗೆ ತರಲು ಸಾಲ ಪಡೆಯುವುದು ಅನಿವಾರ್ಯವಾಗಿದೆ. ಈ ಬಗ್ಗೆ ಯಾವ ನಿಲುವು ತಳೆಯುತ್ತಾರೆ ಎಂಬುದು ಬಜೆಟ್‌ನಲ್ಲಿ ಗೊತ್ತಾಗಲಿದೆ..
ಪೆಟ್ರೋಲ್-ಡೀಸೆಲ್, ಅಡುಗೆ ಅನಿಲ ದರ ಗಗನಕ್ಕೇರಿದೆ.ಹೀಗಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆಯೂ ಆಗಿದೆ. ಇಂಧನ ದರದ ಮೇಲಿನ ತೆರಿಗೆ ಕಡಿತ ಮಾಡಬೇಕೆಂಬ ಒತ್ತಡಗಳು ಸಾರಿಗೆಯವರಿಂದ ಹಿಡಿದು ಎಲ್ಲರಿದಲೂ ಇವೆ. ಕಡಿಮೆ ಮಾಡಿದರೆ ಇರುವ ಅಲ್ಪ ಆದಾಯಕ್ಕೆ ಖೋತಾ ಆದರೆ ಎಂಬ ಚಿಂತೆ.
ಕಳೆದ ವರ್ಷ ೨.೩೭ ಲಕ್ಷ ಕೋಟಿ ರೂ.ಗಳ ಬಜೆಟ್ ಮಂಡಿಸಲಾಗಿತ್ತು. ಆದರೆ, ಈ ಬಾರಿ ಆರ್ಥಿಕ ಸ್ಥಿತಿ ಕುಗ್ಗಿರುವುದರಿಂದ ಬಜೆಟ್ ಗಾತ್ರ ಕಡಿಮೆಯಾಗುವ ಸಾಧ್ಯತೆ ಇದೆ. ಕಾರಣ ಕೊರೊನಅ ಸಂದರ್ಭದಲ್ಲಿ ತೆರಿಗೆ ಸಂಗ್ರಹದ ಪ್ರಮಾಣವು ಈ ವರ್ಷ ಕಡಿಮೆಯಾಗಿದೆ, ಹೀಗಾಗಿ ಎದುರಾಗಿರುವ ಆರ್ಥಿಕ ಮುಗ್ಗಟ್ಟು ಗಮನದಲ್ಲಿಟ್ಟು ಯಡಿಯೂರಪ್ಪ ಬಜೆಟ್‌ ಮಂಡಿಸಬೇಕಿದ್ದು, ಸೋಮವಾರದ (ಮಾ.೮) ಬಜೆಟ್‌ ಮೇಲೆ ಎಲ್ಲರ ಚಿತ್ತವಿದೆ.

ಪ್ರಮುಖ ಸುದ್ದಿ :-   ಚುನಾವಣೆ ವೇಳೆಯೇ ಬಿಜೆಪಿಗೆ ಗುಡ್‌ಬೈ ಹೇಳಿದ ಸಂಸದ ಕರಡಿ ಸಂಗಣ್ಣ : ಕಾಂಗ್ರೆಸ್‌ ಸೇರ್ಪಡೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement