ಮತ್ತೊಬ್ಬ ಪ್ರತಿಭಟನಾ ನಿರತ ರೈತ ಆತ್ಮಹತ್ಯೆಗೆ ಶರಣು

ಚಂಡೀಗಢ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧದ ರೈತರ ಪ್ರತಿಭಟನೆ ನೂರು ದಿನ ದಾಟಿದ ಬೆನ್ನಲ್ಲೇ ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಟಿಕ್ರಿ-ಬಹದ್ದೂರ್‌ಗ ಗಡಿಯಲ್ಲಿ ಭಾನುವಾರ ಹರಿಯಾಣದ ಹಿಸಾರ್ ಜಿಲ್ಲೆಯ ರೈತ ರಾಜ್ಬೀರ್ (55) ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೂ ಕೃಷಿ ಕಾಯ್ದೆ ಹೋರಾಟದಲ್ಲಿ ಪರಿಹಾರ ಸಿಗದ ಹಿನ್ನೆಲೆಯಲ್ಲಿ ನೊಂದ ಮತ್ತೊಬ್ಬ ರೈತ ನೇಣಿಗೆ ಶರಣಾಗಿದ್ದಾನೆ.
ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಕಳೆದ ೧೦೦ ದಿನಗಳಿಂದ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತರು ದೆಹಲಿಯ ಗಡಿಭಾಗಗಳಲ್ಲಿ ಕಳೆದ 100 ದಿನಗಳಿಂದ ಹೊಸ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈವರೆಗೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ 240ಕ್ಕೂ ಹೆಚ್ಚು ರೈತರು ಮೃತಪಟ್ಟಿದ್ದಾರೆ.

 

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ರೈಲು ನಿಲ್ದಾಣದಲ್ಲಿ ವ್ಯಕ್ತಿಯ ಸಾವಿನ ರಹಸ್ಯ ಭೇದಿಸಿದ ರೈಲು ಪ್ರಯಾಣಿಕನ ಮೊಬೈಲ್‌ ಸೆಲ್ಫಿ...!

ನಿಮ್ಮ ಕಾಮೆಂಟ್ ಬರೆಯಿರಿ

advertisement