ಅತ್ಯಾಚಾರ ಆರೋಪಿ ಪ್ರಕರಣ; ನಾವು ಹೇಳಿದ್ದೇ ಬೇರೆ, ವರದಿಯಾಗಿದ್ದೇ ಬೇರೆ-ತಪ್ಪು ವರದಿಗೆ ಸುಪ್ರೀಂ ಕೋರ್ಟ್ ಅಸಮಾಧಾನ‌

ನವದೆಹಲಿ: ಮಹಿಳೆಯರ ಬಗ್ಗೆ ತಮಗೆ ಅತ್ಯಂತ ಹೆಚ್ಚಿನ ಗೌರವವಿದೆ ಎಂದು ಸೋಮವಾರ ಹೇಳಿರುವ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬಡೆ ಅವರನ್ನು ಒಳಗೊಂಡ ಪೀಠ, ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ವಾರದ ವಿಚಾರಣೆಯೊಂದನ್ನು ‘ಸಂಪೂರ್ಣ ತಪ್ಪಾಗಿ ವರದಿ ಮಾಡಲಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಅತ್ಯಾಚಾರ ಸಂತ್ರಸ್ತೆಯನ್ನು ನೀವು ಮದುವೆಯಾಗುತ್ತೀರಾ ಎಂದು ನಾವು ಆರೋಪಿಯನ್ನು ಆರೋಪಿ ನೀಡಿದ ಮುಚ್ಚಳಿಕೆ ಉಲ್ಲೇಖಿಸಿ ಕೇಳಿದ್ದೇವೆ ಅಷ್ಟೇ, ಮದುವೆಯಾಗುವಂತೆ ನಾವು ಆದೇಶ ನೀಡಿಲ್ಲ. ನ್ಯಾಯಾಂಗದ ಗೌರವವು ಇರುವುದು ವಕೀಲರ ಕೈಯಲ್ಲಿ’ ಎಂದು ಪೀಠ ಅಭಿಪ್ರಾಯಪಟ್ಟಿತು.
ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿರುವ 14 ವರ್ಷದ ಬಾಲಕಿ, ತನ್ನ ಉದರದೊಳಗಿರುವ 26 ವಾರಗಳ ಭ್ರೂಣವನ್ನು ತೆಗೆಸಲು ಅನುಮತಿ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ ಇತರ ಇಬ್ಬರು ನ್ಯಾಯಮೂರ್ತಿಗಳಾದ ಎ.ಎಸ್‌.ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್‌ ಅವರಿದ್ದ ಪೀಠ ಈ ವಿಷಯದ ಬಗ್ಗೆ ಹೇಳಿತು.
ಮಾರ್ಚ್‌ 1ರಂದು ಸಾಕ್ಷ್ಯ ಕಾಯ್ದೆಯಲ್ಲಿನ ಅಂಶಗಳ ಆಧಾರದ ಮೇಲೆ ಸುಪ್ರೀಂ ಕೋರ್ಟ್‌ ನ್ಯಾಯಪೀಠವು ಆರೋಪಿ ನೀಡಿದ ಮುಚ್ಚಳಿಕೆಯನ್ನೇ ಉಲ್ಲೇಖಿಸಿ ಅತ್ಯಾಚಾರ ಸಂತ್ರಸ್ತೆ ನೀವು ಮದುವೆಯಾಗುತ್ತೀರಾ ಎಂದು ಕೇಳಿತ್ತು. ಆದರೆ ಈ ವಿಷಯವನ್ನು ಸರಿಯಾಗಿ ಅರ್ಥೈಸಿಕೊಲ್ಳದೆ ಸಂಪೂರ್ಣವಾಗಿ ತಪ್ಪಾಗಿ ವರದಿ ಮಾಡಲಾಯಿತು’ ಎಂದು ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.‌
ಮುಖ್ಯ ನ್ಯಾಯಮೂರ್ತಿ ಅವರಿಂದಲೇ ಇಂತಹ ಹೇಳಿಕೆ ಬಂದುದಕ್ಕೆ ದೇಶವ್ಯಾಪಿಯಾಗಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.
ಆದರೆ ವಕೀಲರ ಸಂಘ ಮುಖ್ಯ ನ್ಯಾಯಮೂರ್ತಿ ಅವರಿಂದ ಯಾವುದೇ ತಪ್ಪು ಆಗಿಲ್ಲ ಎಂದು ಹೇಳಿತ್ತು.

ಪ್ರಮುಖ ಸುದ್ದಿ :-   ಶಿಂಧೆ ಬಣದ ಶಿವಸೇನೆ ಸೇರಿದ ಬಾಲಿವುಡ್‌ ನಟ ಗೋವಿಂದ : 14 ವರ್ಷಗಳ ವನವಾಸದ ನಂತರ ರಾಜಕೀಯಕ್ಕೆ

1.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement