ಅನುಭವ ಮಂಟಪ ನಿರ್ಮಾಣಕ್ಕೆ 200 ಕೋಟಿ ರೂ.ಬಿಡುಗಡೆ

ಬೆಂಗಳೂರು: ಬಸವಕಲ್ಯಾಣದಲ್ಲಿ 500 ಕೋಟಿ ರೂ.ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಿಸಲು ನಿರ್ಧರಿಸಲಾಗಿದ್ದು, ಈ ಬಜೆಟ್‍ನಲ್ಲಿ 200 ಕೋಟಿ ಬಿಡುಗಡೆ ಮಾಡಲಾಗಿದ್ದು, ಶೀಘ್ರವೇ ಕಾಮಗಾರಿ ಕೈಗೆತ್ತಿಕೊಳ್ಳುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.

ಕಿತ್ತೂರು ರಾಣಿ ಚೆನ್ನಮ್ಮ ಅಭಿವೃದ್ಧಿ ಪ್ರಾಧಿಕಾರದ ಅಡಿ ವಿವಿಧ ಕಾಮಗಾರಿಗಳಿಗಾಗಿ 50 ಕೋಟಿ, ಬಸವಣ್ಣ ಅವರ ಜನ್ಮ ಸ್ಥಳ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಇಂಗಳೇಶ್ವರ ಗ್ರಾಮವನ್ನು 5 ಕೋಟಿ ರೂ.ನಲ್ಲಿ ಅಭಿವೃದ್ಧಿಪಡಿಸುವುದು, ಮಂಡ್ಯ ಜಿಲ್ಲೆ ಆದಿಚುಂಚನಗಿರಿ ಶ್ರೀಕ್ಷೇತ್ರದಲ್ಲಿ ಆದಿಚುಂಚನಗಿರಿನಾಥ ಪಾರಂಪರಿಕ ಕೇಂದ್ರ ಸ್ಥಾಪಿಸಿ ನಾಥ ಪರಂಪರೆಯು ನಾಡಿನ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಪರಿಚಯಿಸಲು 10 ಕೋಟಿ ಸಹಾಯ ನೀಡಲಾಗುತ್ತಿದೆ.
ಆದಿಕವಿ ಪಂಪನಿಂದ ಮುದ್ದಣ್ಣನ ಕಾಲಘಟ್ಟದವರೆಗೆ ಎಲ್ಲಾ ಕೃತಿಗಳನ್ನು ಡಿಜಿಟಲೀಕರಿಸಿ ವಿಕಿಪೀಡಿಯಾ, ವಿಕಿಸೋರ್ಸ್ ಮೂಲಕ ಜಗತ್ತಿನ ಯಾವ ಭಾಗದಲ್ಲಾದರೂ ಲಭ್ಯವಾಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಹಾವೇರಿಯಲ್ಲಿ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ಧರಿರುವುದಾಗಿ ಸಿಎಂ ತಿಳಿಸಿದ್ದಾರೆ.
ಭಾರತ ರತ್ನ ಪಂಡಿತ್ ಭೀಮ್ ಸೇನ್ ಜೋಷಿ ಅವರ 100ನೇ ಜನ್ಮ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಸಂಗೀತೋತ್ಸವ, ವಿಚಾರ ಸಂಕಿರಣ ಆಯೋಜಿಸಲಾಗುತ್ತದೆ ಬಜೆಟ್‌ ಭಾಷಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

4 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement