ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ ಘೋಷಣೆ, ೫೦೦ ಕೋಟಿ ರೂ. ಅನುದಾನ ಪ್ರಕಟ

ಬೆಂಗಳೂರು:ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆ ಮೂಲಕ, ಸಮುದಾಯದ ಅಭಿವೃದ್ಧಿ ಕಾರ್ಯಕ್ಕೆ ಅನುಕೂಲವಾಗುವಂತೆ ಒಕ್ಕಲಿಗ ಸಮುದಾಯದ ಅನೇಕ ಮುಖಂಡರು ಪ್ರತಿಭಟನೆ ಹಾಗೂ ಮನವಿ ಮೂಲಕ, ಮುಖ್ಯಮಂತ್ರಿಗೆ ಒತ್ತಾಯ ಮಾಡಿದ್ದು ಬಜೆಟ್‌ ಮೂಲಕ ಫಲಿಸಿದೆ.
ಇದಕ್ಕೆ ಬ ಒಪ್ಪಿಗೆ ನೀಡಿರುವ ಹಣಕಾಸು ಸಚಿವರೂ ಆಗಿರುವ ಯಡಿಯೂರಪ್ಪ, ರಾಜ್ಯ ಬಜೆಟ್ ನಲ್ಲಿ ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒಪ್ಪಿಗೆ ನೀಡಿದ್ದಲ್ಲದೆ ನಿಗಮಕ್ಕೆ 500 ಕೋಟಿ ರೂ ಅನುದಾನ ಕೋಡ ಪ್ರಕಟಿಸಿದ್ದಾರೆ.
ಸೋಮವಾರ ರಾಜ್ಯ ಬಜೆಟ್‌ ಮಂಡಿಸಿದ ಅವರು, ಪರಿಶಿಷ್ಟ ಪಂಗಡದ ಆಶ್ರಮ ಶಾಲೆಗಳಿಗೆ ವಾಲ್ಮೀಕಿ ಆಶ್ರಮ ಶಾಲೆಗಳು ಎಂದು ಮರು ನಾಮಕರಣ ಮಾಡಲಾಗುತ್ತದೆ. ರಾಜ್ಯದ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿವಿಧ ಅಭಿವೃದ್ಧಿ ನಿಗಮಗಳಿಗೆ ಒಟ್ಟಾರೆ 500 ಕೋಟಿ ರೂ ಅನುದಾನ ನೀಡಲಾಗುತ್ತಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ಅನುದಾನ ನಿಗದಿ ಮಾಡಲಾಗಿದೆ. ಈಗಾಗಲೇ 100 ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಒಕ್ಕಲಿಗ ಸಮುದಾಯದ ಹೊಸ ನಿಗಮ ಸ್ಥಾಪನೆ ಮಾಡಲಾಗುತ್ತಿದೆ. ಇದಕ್ಕಾಗಿ 500 ಕೋಟಿ ರೂ ವೆಚ್ಚದಲ್ಲಿ ಕಾರ್ಯಕ್ರಮಗಳ ಅನುಷ್ಠಾನ ಮಾಡಲು ಅನುದಾನ ಒದಗಿಸಲಾಗುತ್ತದೆ ಎಂದು ಪ್ರಕಟಿಸಿದರು.

ಪ್ರಮುಖ ಸುದ್ದಿ :-   ಮಾರ್ಚ್‌ 31ರೊಳಗೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಬದಲಾವಣೆ ಮಾಡಿ : ಬಿಜೆಪಿ ಹೈಕಮಾಂಡಿಗೆ ಮಠಾಧೀಶರ ಗಡುವು

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement