ಕಾಣೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳು ಶವವಾಗಿ ಪತ್ತೆ

ರಾಯಚೂರು : ಭಾನುವಾರ ಆಟವಾಡುತ್ತಿದ್ದಂತ ಸಂದರ್ಭದಲ್ಲಿ ನಾಪತ್ತೆಯಾಗಿದ್ದಂತ ಮಾಜಿ ಶಾಸಕರ ಮೊಮ್ಮಕ್ಕಳಿಬ್ಬರು, ಸೋಮವಾರ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಘಟನೆ ಸಿರವಾರ ತಾಲೂಕಿನ ಬಲ್ಲಟಗಿ ಗ್ರಾಮದಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮಾಜಿ ಶಾಸಕ ಹಂಪಯ್ಯ ನಾಯಕ ಅವರ ಮೊಮ್ಮಕ್ಕಳ್ಳಾದ ವರುಣ್(9) ಹಾಗೂ ಸಣ್ಣಯ್ಯ(5) ಭಾನುವಾರ ಮಧ್ಯಾಹ್ನ ಆಟವಾಡುತ್ತಿದ್ದಾಗ ನಾಪತ್ತೆಯಾಗಿದ್ದರು. ಸಿರವಾರ ಪೊಲೀಸ್ ಠಾಣೆಯಲ್ಲಿ ಈ ಕುರಿತು ನಾಪತ್ತೆ ದೂರು ಕೂಡ ದಾಖಲಾಗಿತ್ತು.
ಪೊಲೀಸರು ಇಬ್ಬರು ಮಕ್ಕಳ ಪತ್ತೆಗಾಗಿ ತೀವ್ರ ಹುಡುಕಾಟ ನಡೆಸಿದ್ದರು. ಇವರು ಸೋಮವಾರ ಬೆಳಿಗ್ಗೆ ಸಿರವಾರ ತಾಲೂಕಿನ ಬಲ್ಲಟಗಿ ಗ್ರಾಮದ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

1 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರಿನ ಹಲವೆಡೆ ಜೋರಾಗಿ ಮಳೆ

ನಿಮ್ಮ ಕಾಮೆಂಟ್ ಬರೆಯಿರಿ

advertisement