ಬಿಎಸ್‌ವೈ ಬಜೆಟ್ಟಿನ ವಿಶೇಷತೆಗಳೇನು? ಪ್ರಮುಖವಾದದ್ದು ಇಲ್ಲಿದೆ ನೋಡಿ

*ಆಯವ್ಯಯ ಗಾತ್ರ (ಸಂಚಿತ ನಿಧಿ)- 2,46,207 ಕೋಟಿ ರೂ.
*ಒಟ್ಟು ಸ್ವೀಕೃತಿ- 2,43,734 ಕೋಟಿ ರೂ.; ರಾಜಸ್ವ ಸ್ವೀಕೃತಿ- 1,72,271 ಕೋಟಿ ರೂ.; ಸಾರ್ವಜನಿಕ ಋಣ 71,332 ಕೋಟಿ ರೂ. ಮತ್ತು ಬಂಡವಾಳ ಸ್ವೀಕೃತಿ 71,463 ಕೋಟಿ ರೂ.
*ಒಟ್ಟು ವೆಚ್ಚ- 2,46,207 ಕೋಟಿ ರೂ.; ರಾಜಸ್ವ ವೆಚ್ಚ – 1,87,405 ಕೋಟಿ ರೂ.; ಬಂಡವಾಳ ವೆಚ್ಚ 44,237 ಕೋಟಿ ರೂ. ಹಾಗೂ ಸಾಲ ಮರುಪಾವತಿ 14,565 ಕೋಟಿ ರೂ.
2021-22 ನೇ ಸಾಲಿನ ಬಜೆಟ್ ಘೋಷಣೆಗಳು
*ಉದ್ಯೋಗಸ್ಥ ಮಹಿಳೆಯರ ಅನುಕೂಲಕ್ಕಾಗಿ ಬೆಂಗಳೂರು ಮತ್ತು ಇತರ ಮಹಾನಗರಗಳಲ್ಲಿರುವ ಅಂಗನವಾಡಿಗಳನ್ನು ಶಿಶುಪಾಲನಾ ಕೇಂದ್ರಗಳನ್ನಾಗಿ ಉನ್ನತೀಕರಣ; ಜಿಲ್ಲಾ ಕೇಂದ್ರಗಳಲ್ಲಿ ತಲಾ ಎರಡು ಪ್ರಮುಖ ಸರ್ಕಾರಿ ಕಚೇರಿಗಳಲ್ಲಿ ಶಿಶುಪಾಲನಾ ಪಾಲನ ಕೇಂದ್ರ ತೆರಯಲು ಕ್ರಮ
*ಸೇವಾ ವಲಯದ ಮಹಿಳಾ ಉದ್ಯಮಿಗಳಿಗೆ ಶೇ. 4ರ ರಿಯಾಯಿತಿ ಬಡ್ಡಿ ದರದಲ್ಲಿ ಮಹಿಳಾ ಅಭಿವೃದ್ಧಿ ನಿಗಮ/ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಿಂದ 2 ಕೋಟಿ ರೂ.ವರೆಗೆ ಸಾಲ ಸೌಲಭ್ಯ.
*ಸಂಜೀವಿನಿ ವ್ಯಾಪ್ತಿಯ ಗ್ರಾಮೀಣ ಮಹಿಳಾ ಸ್ವಸಹಾಯ ಸಂಘಗಳಿಗೆ ಆರು ಸಾವಿರ ಸಣ್ಣ ಉದ್ಯಮ ಸ್ಥಾಪನೆಗೆ ಪಂಚಾಯತ್ ರಾಜ್ ಸಂಸ್ಥೆಗಳ ಮೂಲಕ ಬೆಂಬಲ; 60 ಸಾವಿರ ಮಹಿಳೆಯರಿಗೆ ಅನುಕೂಲ ಎಂದು ನಿರೀಕ್ಷೆ.
*ಮಹಿಳೆಯರ ಸಣ್ಣ ಉದ್ಯಮಗಳಿಗೆ ತಾಂತ್ರಿಕ ನೆರವು. 2,260 ಕಿರು ಉದ್ದಿಮೆಗಳ ಮೂಲಕ 25 ಸಾವಿರ ಮಹಿಳೆಯರಿಗೆ ಉತ್ತೇಜನಕ್ಕೆ ನಿರ್ಧಾರ
*ಮಹಿಳಾ ಸ್ವಸಹಾಯ ಸಂಘಗಳು ಹಾಗೂ ಮಹಿಳಾ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು, ವಿಭಾಗ ಮಟ್ಟದಲ್ಲಿ ವಾರ್ಷಿಕ ಮೇಳ ಆಯೋಜನೆ ಹಾಗೂ ಇ-ಮಾರುಕಟ್ಟೆ ಸೌಲಭ್ಯ ಜಾರಿ.
*ಬೆಂಗಳೂರಿನಲ್ಲಿ ಗಾರ್ಮೆಂಟ್ ಉದ್ಯಮದ ಮಹಿಳಾ ಕಾರ್ಮಿಕರಿಗೆ 30 ಕೋಟಿ ರೂ. ವೆಚ್ಚದಲ್ಲಿ ರಿಯಾಯಿತಿ ದರದಲ್ಲಿ ಬಿಎಂಟಿಸಿ ಬಸ್ ಪಾಸ್ ನೀಡುವ ‘ವನಿತಾ ಸಂಗಾತಿ’ ಯೋಜಗೆ ಚಾಲನೆ.
*ಮಹಿಳೆಯರು ಉದ್ಯೋಗ ಕೈಗೊಳ್ಳಲು ಪೂರಕ ವಾತಾವರಣ ನಿರ್ಮಾಣಕ್ಕಾಗಿ ವಿವಿಧ ನಿಯಮಾವಳಿಗಳ ಮರು ಪರಿಶೀಲನೆ.
*ಮಹಿಳಾ ಅಯವ್ಯಯ ಮಕ್ಕಳ ಆಯವ್ಯಯವನ್ನು ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಅಳವಡಿಸಲು ಕ್ರಮಕ್ಕೆ ನಿರ್ಧಾರ
*ಸೇಫ್ ಸಿಟಿ ಯೋಜನೆಯಡಿ ಬೆಂಗಳೂರು ನಗರದ ಸಾರ್ವಜನಿಕ ಸ್ಥಳಗಳಲ್ಲಿ 7,500 ಕ್ಯಾಮೆರಾ ಅಳವಡಿಕೆ; ತಂತ್ರಜ್ಞಾನ ಆಧಾರಿತ ಇ-ಬೀಟ್ ಮೂಲಕ ರಾತ್ರಿ ಗಸ್ತನ್ನು ತೀವ್ರಗೊಳಿಸಲು ಕ್ರಮಕ್ಕೆ ನಿರ್ಧಾರ
*ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸೂಕ್ತ ನೆರವು ಹಾಗೂ ಮಾರ್ಗ ದರ್ಶನ ನೀಡಲು ನಿಮ್ಹಾನ್ಸ್ ಮತ್ತು ರಾಷ್ಟ್ರೀಯ ಕಾನೂನು ಶಾಲೆಯ ಸಹಕಾರೊಂದಿಗೆ ಸೇವಾ ಸಂಸ್ಥೆ ಸ್ಥಾಪನೆ.
* ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ಲೈಸೆನ್ಸ್ಪಡೆದ ಮಹಿಳೆಯರಿಗೆ ಸಮಿತಿ ಪ್ರಾಂಗಣದಲ್ಲಿನ ನಿವೇಶನ, ಗೋದಾಮು, ಅಂಗಡಿ, ಅಂಗಡಿ ಗೋದಾಮುಗಳ ಹಂಚಿಕೆಯಲ್ಲಿ ಶೇ. 10ರಷ್ಟು ಮೀಸಲಾತಿ ಘೋಷಣೆ.
*ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಆರು ತಿಂಗಳ ಮಕ್ಕಳ ಆರೈಕೆ ರಜೆ ಸೌಲಭ್ಯ.
*ಮಹಿಳಾ ವಾಣಿಜ್ಯೋದ್ಯಮಿಗಳನ್ನು ಬೆಂಬಲಿಸಲು, ಐದು ಕೋಟಿ ರೂ. ವೆಚ್ಚದಲ್ಲಿ ಎಲೆವೇಟ್ವುಮೆನ್ಆಂಟ್ರಪ್ರೂನರ್ಶಿಪ್(Elevate Women Entrepreneurship)ಕಾರ್ಯಕ್ರಮ ಜಾರಿ
*ರಾಜ್ಯದ ಸ್ವ-ಸಹಾಯ ಗುಂಪುಗಳು ವು ತ್ತು ಅವುಗಳ ಒಕ್ಕೂಟ ಬಲಪಡಿಸಲು ಸ್ವಸಹಾಯ ಗುಂಪುಗಳ ನೀತಿ ಜಾರಿ; ಎಲ್ಲ ಸ್ವ ಸಹಾಯ ಗುಂಪುಗಳನ್ನು ಜೀವನೋಪಾಯ ಅಭಿಯಾನದ ವ್ಯಾಪ್ತಿಗೆ ತರಲು ಸರ್ಕಾರದ ಕ್ರಮ.
*ಮುಖ್ಯಮಂತ್ರಿಗಳ ನೇರ ಮೇಲ್ವಿಚಾರಣೆಯಲ್ಲಿ ‘ಮಹಿಳೆಯರ ರಕ್ಷಣೆ ಮತ್ತು ಸಬಲೀಕರಣ ಅಭಿಯಾನ’ಕ್ಕೆ ಚಾಲನೆ ಘೋಷಣೆ
*ಮಹಿಳಾ ಉದ್ದೇಶಿತ ಯೋಜನೆಗಳಿಗೆ 37,188 ಕೋಟಿ ರೂ.ಅನುದಾನ.ವಲಯ 1: ಕೃಷಿ ಮತ್ತು ಪೂರಕ ಚಟುವಟಿಕೆಗಳು ಸಾವಯವ ಕೃಷಿ ಉತ್ತೇಜನಕ್ಕೆ 500 ಕೋಟಿ ರೂ. ಯೋಜನೆ
*ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ ಒಟ್ಟಾರೆಯಾಗಿ 31,028 ಕೋಟಿ ರೂ. ಅನುದಾನ
*ವಿಜಯಪುರ ಜಿಲ್ಲೆ ಇಟ್ಟಂಗಿಹಾಳ ಗ್ರಾಮದಲ್ಲಿ ಆತ್ಮನಿರ್ಭರ ಭಾರತ ಅಭಿವೃದ್ದಿ ಯೋಜನೆಯಡಿ ಆಹಾರ ಪಾರ್ಕ್ಸ್ಥಾಪನೆ
*ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ರೆ ತರ ಮಕ್ಕಳಿಗೆ ಇರುವ ಮೀಸಲಾತಿ ಶೇ.50ಕ್ಕೆ ಹೆಚ್ಚಳ.
* ಕೃಷಿ ಯಾಂತ್ರೀಕರಣ ಯೋಜನೆಯಡಿ ಸಣ್ಣ ಟ್ಯ್ರಾಕ್ಟರ್ಗಳಿಗೆ ನೀಡುತ್ತಿದ್ದ ಸಹಾಯಧನ 25-45 HP ಟ್ರ್ಯಾಕ್ಟರ್ಗಳಿಗೆ ವಿಸ್ತರಣೆ.
* ರಾಷ್ಟ್ರೀಯ ಇ-ಮಾರುಕಟ್ಟೆ ಪ್ರೈವೇಟ್ ಲಿಮಿಟೆಡ್ ಮೂಲಕ ಸಾವಯವ ಮತ್ತು ಸಿರಿಧಾನ್ಯಗಳ ವೈಜ್ಞಾನಿಕ ಮಾರಾಟಕ್ಕೆ ಅವಕಾಶ
*ಮುಂದಿನ 5 ವರ್ಷಗಳಲ್ಲಿ 75 ಕೋಟಿ. ವೆಚ್ಚದ ಲ್ಲಿ ರಾಜ್ಯದ ಕೃಷಿ ಭೂಮಿಯಲ್ಲಿ ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನ ಕಾರ್ಯಕ್ರಮ 2021-22ನೇ ಸಾಲಿನಲ್ಲಿ 10 ಕೋಟಿ ರೂ. ಅನುದಾನ
*ಆತ್ಮ ನಿರ್ಭರ ಭಾರತ ಅಭಿಯಾನದ ಅಡಿಯಲ್ಲಿ ಆಹಾರ ಸಂಸ್ಕರಣೆ ಹಾಗೂ ಕೊಯ್ಲೋತ್ತರ ನಿರ್ವ ಹಣೆ ಘಟಕಗಳಿಗೆ ನೀಡುವ ಶೇ. 35 ರಷ್ಟು
ಸಹಾಯಧನವ ನ್ನು ಶೇ. 50ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರದಿಂದ ಶೇ. 15
ರಷ್ಟು ಹೆಚ್ಚುವರಿಸಹಾಯಧನ; 50 ಕೋಟಿ ರೂ. ಗಳ ಅನುದಾನ.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

*ಹೊಸ ತಂತ್ರಜ್ಞಾನ, ಹೂಸ ಬೆಳೆ ತಳಿ, ಉತ್ತಮ ನಿರ್ವಹಣಾ ಪದ್ಧತಿಗಳನ್ನು ರೈತರಿಗೆ ಪರಿಚಯಿಸಲು ಪ್ರಾತ್ಯಕ್ಷಿಕಾ ಕ್ಷೇತ್ರಗಳ ಅಭಿವೃದ್ಧಿ
*ರೈತ ಉತ್ಪಾದಕರ ಸಂಸ್ಥೆಗಳು ಮಾರಾಟ ಮಾಡುವ ತೋಟಗಾರಿಕೆ ಉತ್ಪನ್ನಗಳಿಗೆ ಬ್ರಾಂಡ್ ವ್ಯಾಲ್ಯೂ ಕಲ್ಪಿಸಲು ಹಾಗೂ ಉತ್ತಮ ಮಾರುಕಟ್ಟೆ
ಸಂಪರ್ಕ ಒದಗಿಸಲು ಕ್ರಮ.
*ಕೊಪ್ಪಳ ಜಿಲ್ಲೆಯ ಸಿರಿವಾರ ಗ್ರಾಮದಲ್ಲಿ ತೋಟಗಾರಿಕೆ ತಂತ್ರಜ್ಞಾನ
ಪಾರ್ಕ್ ಅಭಿವೃದ್ಧಿ.
*ರೈತನು ವರ್ಷವಿಡೀ ವರಮಾನ ಪಡೆಯಲು ಸಮಗ್ರ ಕೃಷಿ ಪದ್ಧತಿ ಕಾರ್ಯಕ್ರಮ ಅನುಷ್ಠಾನ.
*ಅಡಿಕೆ ಬೆಳಗಾರರನ್ನು ಬಾಧಿಸುತ್ತಿರುವ ಹಳ ದಿ ಎಲೆ ರೋಗದ ಕುರಿತ ಸಂಶೋಧನೆ ಹಾಗೂಪರ್ಯಾಯ ಬೆಳೆಯನ್ನು ಪ್ರೋತ್ಸಾಹಿಸಲು 25 ಕೋಟಿ
*ಹೊಸ ಹೆಬ್ರಿಡ್ ಬೀಜ ನೀತಿ ಜಾರಿಗೆ ಕ್ರಮ. ಸುವಾಸನೆಯುಕ್ತ ಮತ್ತು ವೈದ್ಯಕೀಯ ಗಿಡಗಳು, ಹಣ್ಣು ಹಂಪಲು, ತರಕಾರಿಗಳು ಮತ್ತು ಸಂಬಾರ ಪದಾರ್ಥಗಳಿಗಾಗಿ ಹೊಸ ಕೃಷಿ ರಫ್ತು ವಲಯ ಸ್ಥಾಪನೆ ತೋಟಗಾರಿಕಾ ಬೆಳೆಗಳ ರಫ್ತಿಗೆ ರಾಜ್ಯದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಪೂರಕ ಸೌಲಭ್ಯ. ಹಣ್ಣು ಮತ್ತು ತರಕಾರಿ ಬೆಳೆಗಳ ಮೌಲ್ಯ ವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ಕಲ್ಪಿಸಲು ಬೆಳೆಗಾರರಿಗೆ ತರಬೇತಿ ಮತ್ತು ತಾಂತ್ರಿಕ ಬೆಂಬಲ
*ದ್ರಾಕ್ಷಿ ಕೃಷಿಯ ಉತ್ತೇಜನಕ್ಕೆ ಕನರ್ಾಟಕ ದ್ರಾಕ್ಷಾರಸ ಮಂಡಳಿಯನ್ನು ಕರ್ನಾಟಕ ದ್ರಾಕ್ಷಿ ಹಾಗೂ ದ್ರಾಕ್ಷಾರಸ ಮಂಡಳಿಯನ್ನಾಗಿ ಪುನರ್
ರಚಿಸಲು ಕ್ರಮ.
*ಬೆಂಗಳೂರಿನ ಓಕಳೀಪುರಂನಲ್ಲಿ ರೇಷ್ಮೆ ಇಲಾಖೆಯ ಎಲ್ಲ ಕಚೇರಿಗಳನ್ನು ಒಂದೇ ಸೂರಿನಡಿ ತರಲು, 150 ಕೋಟಿ ರೂ. ವೆಚ್ಚದಲ್ಲಿ ರೇಷ್ಮೆ ಸಂಸ್ಥೆ ನಿರ್ಮಾಣ
*ರಾಮನಗರದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಹೈ-ಟೆಕ್ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ

* ದೇಶೀಯ ಪಶುಸಂಪತ್ತಿನ ಶಾಶ್ವತ ಪ್ರದರ್ಶನ ವು ತ್ತು ಪ್ರಾತ್ಯಕ್ಷಿಕೆಯೊಂದಿಗೆ ಮಾಹಿತಿ ತರಬೇತಿ ನೀಡಲು ಹೆಸರಘಟ್ಟದಲ್ಲಿ ೧೦೦ ಕೋಟಿ ರೂ. ವೆಚ್ಚದಲ್ಲಿ ಥೀಮ್ ಪಾರ್ಕ್ಸ್ಥಾಪನೆ.
*ನಂದಿದುರ್ಗ ಮೇಕೆ ತಳಿಗಳನ್ನು ಅಭಿವೃದ್ಧಿ ಪಡಿಸಿ, ಉತ್ಕೃಷ್ಟದರ್ಜೆ ಹೋತ ವಿತರಿಸಲು ಒಂದು ಕೋಟಿ ರೂ. ಅನುದಾನ.

*ರಾಜ್ಯದಲ್ಲಿ 16 ಮೀನುಮರಿ ಉತ್ಪಾದನಾ ಕೇಂದ್ರಗಳ ತಾಂತ್ರಿಕ ಉನ್ನತೀಕರಣಕ್ಕೆ 2 ಕೋಟಿ ರೂ. ಅನುದಾನ. ಕರ್ನಾಟಕದಲ್ಲಿ ಮೀನುಗಾರಿಕೆ ಅಭಿವೃದ್ದಿ ನಿಗಮದ ವತಿಯಿಂದ ಆರು ಕೋಟಿ ರೂ.ಗಳ ವೆಚ್ಚದ ಲ್ಲಿ ಮೀನು ಉತ್ಪನ್ನಗಳ ಸಂಸ್ಕರಣೆಗೆ ಆಧುನಿಕ ಸಂಸ್ಕರಣಾ ಮತ್ತು ಮೌಲ್ಯವರ್ಧನಾ ಕೇಂದ್ರ ಸ್ಥಾಪನೆ.
*ರಾಜ್ಯಾದ್ಯಂತ 30 ಕೋಟಿ ರೂ.ಗಳ ವೆಚ್ಚದ ಲ್ಲಿ ಮೀನು ಮಾರಾಟ ಘಟಕ ಹಾಗೂ ಮತ್ಸ್ಯದರ್ಶನಿಗಳ ಸ್ಥಾಪನೆ.

*ಬೆಡ್ತಿ-ವರದಾ ನದಿ ಜೋಡಣೆಯಡಿ ಒಟ್ಟು 22 ಟಿಎಂಸಿ. ನೀರನ್ನು ಬಳಸಿಕೊಳ್ಳಲು ವಿವರವಾದ ಯೋಜನಾ ವರದಿಯನ್ನು ನ್ಯಾಶನಲ್ಪರ್ಸೆಪ್ಟಿವ್ಪ್ಲ್ಯಾನ್( National Perspective Plan ) ಅಡಿಯಲ್ಲಿ ಸಿದ್ಧಪಡಿಸಲು ಎನ್ಡಬ್ಲುವಿಎ (NWDA)ಗೆ ಮನವಿ . ತಾಂತ್ರಿಕ ಸಾಧ್ಯತೆಗನುಗುಣವಾಗಿ ಯೋಜನೆಗಳನ್ನು ರೂಪಿಸಲು ಕ್ರಮ. ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಅನುಕೂಲ.
*ವಿಶ್ವ ಬ್ಯಾಂಕ್ ನೆರವಿನ ಡ್ರಿಪ್ (ಆಖಕ) ಯೋಜನೆಯಡಿ 1500 ಕೋಟಿ ರೂ. ಮೊತ್ತದಲ್ಲಿ ರಾಜ್ಯದ 58 ಅಣೆಕಟ್ಟುಗಳ ಪುನಶ್ಚೇತನ ಮತ್ತು ಅಭಿವೃದ್ದಿಗೆಗೆ ಪ್ರಸ್ತಾವನೆ. ಪ್ರಸಕ್ತ ಸಾಲಿನಲ್ಲಿ ಯೋಜನಯ ಜಾರಿಗೆ ಆದ್ಯತೆ.
* ರಾಜ್ಯ ಉಗ್ರಾಣ ನಿಗಮ, ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು ಟಿಎಪಿಸಿಎಂಎಸ್ ಹಾಗೂ ಇತರೆ ಸಹಕಾರ ಸಂಸ್ಥೆಗಳು ಹೊಂದಿರುವ ಗೋದಾಮುಗಳಲ್ಲಿ ಕೃಷಿ ಉತ್ಪನ್ನಗಳ ಸಂಗ್ರಹಣಾ ಶುಲ್ಕದ ಶೇ.25 ಸಹಾಯಧನ ವಿತರಣೆ; 25 ಕೋಟಿ ರೂ. ಅನುದಾನ.
*ರಾಜ್ಯದ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು ಹಾಗೂ ಟಿಎಪಿಸಿಎಂಎಸ್ ಗಳಲ್ಲಿ ಸಂಗ್ರಹಿಸಿದ ಕೃಷಿ ಉತ್ಪನ್ನಗಳ ಮೇಲೆ ಶೇ.11 ರ ದರದಲ್ಲಿ ವಿತರಿಸಿದ ಅಡಮಾನ ಸಾಲ ಸೌಲಭ್ಯಕ್ಕೆ 6 ತಿಂಗಳ ಅವಧಿಗೆ ಸರ್ಕಾರದಿಂದಲೇ ಶೇ.4 ರ ಬಡ್ಡಿ ಸಹಾಯಧನ. ಐದು ಕೋಟಿ ರೂ. ಅನುದಾನ. 198 ಕೋಟಿ ರೂ . ವೆಚ್ಚದಲ್ಲಿ 5500 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣ.
* ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕುಗಳಿಗೆ ಗರಿಷ್ಠ 10 ಲಕ್ಷ ರೂ. ವರೆಗೆ, ಶೇ. 25 ರಷ್ಟು ಷೇರು ಬಂಡವಾಳ ಒದಗಿಸಲು ಕ್ರಮ.
* ಬೈಯಪ್ಪನಹಳ್ಳಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೂವಿನ ಮಾರುಕಟ್ಟೆ ನಿರ್ಮಾಣ
* ಸಿಂಗೇನ ಅಗ್ರಹಾರ ಸಮೀಪದ ಗುಳಿಮಂಗಳ ಗ್ರಾಮದಲ್ಲಿ ಅತ್ಯಾಧುನಿಕ ತರಕಾರಿ ಮಾರುಕಟ್ಟೆ ನಿರ್ಮಾಣ
*ಬಳ್ಳಾರಿಯ ಆಲದಹಳ್ಳಿ ಗ್ರಾಮದಲ್ಲಿ ಅತ್ಯಾಧುನಿಕ ಒಣಮೆಣಸಿನ ಕಾಯಿ ಮಾರುಕಟ್ಟೆ ಸ್ಥಾಪನೆ.
*ಚಾಮರಾಜನಗರದಲ್ಲಿ ಅರಿಶಿನ ಮಾರುಕಟ್ಟೆಯ ಸಮಗ್ರ ಅಭಿವೃದ್ದಿ
*ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನಾಲ್ಕು ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಗುಣ ವಿಶ್ಲೇಷಣಾ ಘಟಕ ಸ್ಥಾಪನೆ.
*ರಾಜ್ಯದ ನೀರಾವರಿ ಯೋಜನೆಗಳನ್ನು ಆದ್ಯತೆವುಳ್ಳವರಿಗೆ ಜಾರಿಗೊಳಿಸಲು ಕ್ರಮ. ಪ್ರಮುಖ ಯೋಜನೆಗಳಾದ ಕೃಷ್ಣಾ ಮೇಲ್ದಂಡೆ ಹಂತ 3, ಎತ್ತಿನಹೊಳೆ, ಮಹದಾಯಿ, ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಆದ್ಯತೆ. ಕೊಪ್ಪಳ ಜಿಲ್ಲೆ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣಕ್ಕೆ ಕ್ರಮ.

ಪ್ರಮುಖ ಸುದ್ದಿ :-   ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

*ಏತ ನೀರಾವರಿ ಯೋಜನೆಗಳ ವ್ಯವಸ್ಥಿತ ಕಾರ್ಯಚರಣೆ ಮತ್ತು ನಿರ್ವಹಣೆಗಾಗಿ ಕಾರ್ಯನೀತಿ ಜಾರಿ.
ಬೆಂಗಳೂರು ನಗರ ಮತ್ತು ಗ್ರಾಮಾಂತರ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ 234 ಕೆರೆಗಳಿಗೆ ಬೆಂಗಳೂರು ನಗರದ ವೃಷಭಾವತಿ ಕಣಿವೆಯಿಂದ ದ್ವಿತೀಯ ಹಂತಕ್ಕೆ ಸಂಸ್ಕರಿಸಿದ 308 ಎಂಎಲ್ ಡಿ ನೀರು ತುಂಬಿಸುವ 500 ಕೋಟಿ ರೂ. ವೆಚ್ಚದ ಯೋಜನೆ ಅನುಷ್ಠಾನ.
*ಪಶ್ಚಿಮವಾಹಿನಿ ಯೋಜನೆ ಕುರಿತ ಮಾಸ್ಟರ್ ಪ್ಲಾನ್ ಅಡಿ, ಮುಂದಿನ 5 ವರ್ಷಗಳಲ್ಲಿ 3986 ಕೋಟಿ ರೂ. ವೆಚ್ಚದಲ್ಲಿ 1348 ಕಿಂಡಿ ಅಣೆಕಟ್ಟು ನಿರ್ಮಾಣ. 2021-22ನೇ ಸಾಲಿನಲ್ಲಿ 500 ಕೋಟಿ ರೂ. ಅನುದಾನ.
*ಉತ್ತರ ಕನ್ನಡ ಜಿಲ್ಲೆಯ ಕರವಾಳಿ ಪ್ರದೇಶದಲ್ಲಿ 300 ಕೋಟಿ ರೂ. ವೆಚ್ಚದ ಲ್ಲಿ ನದಿಗಳಲ್ಲಿ ಪ್ರವಾಹ ಮತ್ತು ಭಾರಿ ಅಲೆಗಳಿಂದಾಗಿ ಉಪ್ಪುನೀರು ಹಿಮ್ಮುಖವಾಗಿ ನುಗ್ಗುವುದನ್ನು ತಡೆಗಟುವ್ಟ ಖಾರ್ಲ್ಯಾಂಡ್ ಯೋಜನೆ ಜಾರಿ.

*ಸಮಗ್ರ ಗೋಸಂಕುಲ ಸಮೃದ್ಧಿ ಯೊಜನೆಯಡಿಯಲ್ಲಿ ಒಂದು ಕೋಟಿ ರೂ. ವೆಚ್ಚದ ಲ್ಲಿ ರಾಜ್ಯದ ರೈತರಿಗೆ ಹೊರರಾಜ್ಯದ ದೇಶಿ ತಳಿಗಳನ್ನು ಪರಿಚಯಿಸಲು ಕ್ರಮ.
*ಆಕಸ್ಮಿಕವಾಗಿ ಮರಣ ಹೊಂದುವ ಕುರಿ ಮತ್ತು ಮೇಕೆಗಳಿಗೆ ಪರಿಹಾರ ಧನ ನೀಡುವ ಅನುಗ್ರಹ ಕೊಡುಗೆ ಯೋಜನೆ ಮುಂದುವರಿಕೆ.
*ಪಶುವೆದ್ಯಕೀಯ ವಿಜ್ಞಾನದಲ್ಲಿ ಅರ್ಯುವೇದ ಔಷಧಿಗಳ ಅಳವಡಿ ಕೆ ಉತ್ತೇಜನಕ್ಕೆ ಶಿವಮೊಗ್ಗದ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ಕಾಲೇಜಿನಲ್ಲಿ ಎರಡು ಕೋಟಿ ರೂ.ಗಳ ವೆಚ್ಚದಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆ
*ಯಾಂತ್ರೀಕೃತ ದೋಣಿಗಳಿಗೆ 1.5 ಲಕ್ಷ ಕಿಲೋಲೀಟರ್ ಡೀಸೆಲ್ ಮೇಲಿನ ಮಾರಾಟ ಕರ ಮರುಪಾವತಿಯ ಬದಲು ಡೀಸೆಲ್ ಡೆಲಿವರಿ ಪಾಯಿಂಟ್ನಲ್ಲಿಯೇ ಕರ ರಹಿತ ದರದಲ್ಲಿ ಡೀಸೆಲ್ ವಿತರಣೆಗೆ ಕ್ರಮ.
*ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಯ ಕಾರ್ಯಕ್ರಮಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರದಿಂದ 62 ಕೋಟಿ ರೂ. ಅನುದಾನ.

 

3.3 / 5. 6

ಶೇರ್ ಮಾಡಿ :

  1. Vinod Nayak

    ManyaYediurapparige uttara kannada Jille ondu ide ambudu maratante kanuttade.

ನಿಮ್ಮ ಕಾಮೆಂಟ್ ಬರೆಯಿರಿ

advertisement