ರಾಜ್ಯ ಬಜೆಟ್‌ನಲ್ಲಿ ಮಹಿಳೆಯರಿಗೆ ಬಂಪರ್‌ ‌: ಮಹಿಳಾ ಉದ್ದೇಶಿತ ಯೋಜನೆಗಳಿಗೆ 37,188 ಕೋಟಿ ರೂ ಅನುದಾನ

 

ಬೆಂಗಳೂರು; 2021-22ನೇ ಸಾಲಿನ ಬಜೆಟ್ನಲ್ಲಿ ಅಂತಾರಾಷ್ಟ್ರೀಯ ಮಹಿಳೆಯರ ದಿನವಾದ ಕಾರಣ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಪ್ರಕಟಿಸಲಾಗಿದೆ.ಮಹಿಳಾ ಉದ್ದೇಶಿತ ಯೋಜನೆಗಳಿಗೆ 37,188 ಕೋಟಿ ರೂ ಅನುದಾನ, ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಆರು ತಿಂಗಳ ಮಕ್ಕಳ ಆರೈಕೆ ರಜೆಯನ್ನು ಸಹ ಬಜೆಟ್‌ನಲ್ಲಿ ಮುಖ್ಯಮಂತ್ರಿ ಯಡಯೂರಪ್ಪ ಘೋಷಣೆ ಮಾಡಿದ್ದಾರೆ.
ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ, ಶೇ.4 ರಷ್ಟು ಬಡ್ಡಿದರದಲ್ಲಿ ಮಹಿಳಾ ಉದ್ಯಮಿಗಳಿಗೆ ಸಾಲ ನೀಡಲಾಗುತ್ತದೆ. ಬಿಎಂಟಿಸಿ ಬಸ್‌ಪಾಸ್‌ನಲ್ಲಿ ಮಹಿಳೆಯರಿಗೆ ರಿಯಾಯಿತಿಯನ್ನು ಕೂಡ ಸರ್ಕಾರ ಘೋಷಿಸಿದೆ. ವನಿತಾ ಸಂಗಾತಿ ಹೆಸರಿನಲ್ಲಿ ರಿಯಾಯಿತಿ, . ಹಪ್ಪಳ, ಉಪ್ಪಿನಕಾಯಿ ತಯಾರಕರಿಗೆ ಆನ್‌ಲೈನ್ ಮಾರುಕಟ್ಟೆ ವ್ಯವಸ್ತೆ ಬಗ್ಗೆ ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ.
ರಾಜ್ಯದ ಸ್ವ-ಸಹಾಯ ಗುಂಪುಗಳು ಮತ್ತು ಅವುಗಳ ಒಕ್ಕೂಟವನ್ನು ಬಲಪಡಿಸಲು ಸ್ವಸಹಾಯ ಗುಂಪುಗಳ ನೀತಿ ಜಾರಿ, ಎಲ್ಲ ಸ್ವಸಹಾಯ ಗುಂಪುಗಳನ್ನು ಜೀವನೋಪಾಯ ಅಭಿಯಾನದ ವ್ಯಾಪ್ತಿಗೆ ತರಲು ಕ್ರಮ, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸೂಕ್ತ ನೆರವು ಹಾಗೂ ಮಾರ್ಗದರ್ಶನ ನೀಡಲು ನಿಮ್ಹಾನ್ಸ್‌ ಮತ್ತು ರಾಷ್ಟ್ರೀಯ ಕಾನೂನು ಶಾಲೆಯ ಸಹಯೋಗದೊಂದಿಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ ಪ್ರಸ್ತಾಪ, 2 ಕೋಟಿವರೆಗೆ ಮಹಿಳೆಯರಿಗೆ ಸಾಲ ನೀಡಲಾಗುತ್ತದೆ. ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ.10ರಷ್ಟು ರಿಯಾಯಿತಿ ಮೀಸಲಾತಿ ನೀಡಲಾಗುತ್ತದೆ ಎಂದು ಯಡಿಯೂರಪ್ಪ ಹೇಳಿದರು.

ಪ್ರಮುಖ ಸುದ್ದಿ :-   ನಾಳೆಯಿಂದ ಸಿಇಟಿ ಪರೀಕ್ಷೆ ಆರಂಭ

ಲಾಕ್ ಡೌನ್ ತೆರವು ಮಾಡಿದ ಬಳಿಕ ಸಾಮಾಜಿಕ ಮತ್ತು ಆರ್ಥಿಕ ಚಟುವಟಿಕೆಗಳು ಆರಂಭವಾಗಿವೆ. ಆದರೆ, ರಾಜಸ್ವ ಸಂಗ್ರಹದಲ್ಲಿ ನಿರೀಕ್ಷಿತ ಗುರಿ ತಲುಪಲು ಸಾಧ್ಯವಿಲ್ಲ ಎಂಬುದನ್ನು ಒಪ್ಪಿಕೊಳ್ಳಬೇಕು ಎಂದು ಯಡಿಯೂರಪ್ಪ ಹೇಳಿದರು.
ರಾಜ್ಯದ ಸ್ವ-ಸಹಾಯ ಗುಂಪುಗಳು ಮತ್ತು ಅವುಗಳ ಒಕ್ಕೂಟವನ್ನು ಬಲಪಡಿಸಲು ಸ್ವಸಹಾಯ ಗುಂಪುಗಳ ನೀತಿ ಜಾರಿ, ಎಲ್ಲಾ ಸ್ವಸಹಾಯ ಗುಂಪುಗಳನ್ನು ಜೀವನೋಪಾಯ ಅಭಿಯಾನದ ವ್ಯಾಪ್ತಿಗೆ ತರಲು ಕ್ರಮ.ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸೂಕ್ತ ನೆರವು ಹಾಗೂ ಮಾರ್ಗದರ್ಶನ ನೀಡಲು ನಿಮ್ಹಾನ್ಸ್ಮತ್ತು ರಾಷ್ಟ್ರೀಯ ಕಾನೂನು ಶಾಲೆಯ ಸಹಯೋಗದೊಂದಿಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ.

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement