ರಾಜ್ಯ ಬಜೆಟ್‌: ಅಯೋಧ್ಯೆಯಲ್ಲಿ ಯಾತ್ರಿ ನಿವಾಸ ನಿರ್ಮಾಣಕ್ಕೆ ೧೦ ಕೋಟಿ ರೂ.

ಬೆಂಗಳೂರು: ರಾಜ್ಯ ಸರ್ಕಾರವು ಅಯೋಧ್ಯೆಯಲ್ಲಿ  ಯಾತ್ರಿ ನಿವಾಸ ನಿರ್ಮಾಣ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಿದೆ.
ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು 2021-22ರ ಸಾಲಿನ ಬಜೆಟ್‌ ಸೋಮವಾರ ಮಂಡಿಸಿದಾಗ ಈ ಘೋಷಣೆ ಮಾಡಿದರು.
‘ಅಯೋಧ್ಯೆಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸುಸಜ್ಜಿತ ಯಾತ್ರಿ ನಿವಾಸ ನಿರ್ಮಾಣಕ್ಕೆ ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ. ಅನುದಾನ ನಿಗದಿ ಮಾಡಲಾಗಿದೆ,’ ಎಂದು ಅವರು ಬಜೆಟ್‌ ಮಂಡನೆ ವೇಳೆ ಹೇಳಿದರಲ್ಲದೆ ಈ ಯಾತ್ರಿ ನಿವಾಸಕ್ಕಾಗಿ ಉತ್ತರ ಪ್ರದೇಶ ಸರ್ಕಾರವು 5 ಎಕರೆ ಪ್ರದೇಶವನ್ನು ಮಂಜೂರು ಮಾಡಲಿದೆ ಎಂದು ಸದನಕ್ಕೆ ತಿಳಿಸಿದರು.

1 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

ನಿಮ್ಮ ಕಾಮೆಂಟ್ ಬರೆಯಿರಿ

advertisement