ರಾಜ್ಯ ಬಜೆಟ್‌: ಕಳಸಾ-ಬಂಡೂರಿ ಯೋಜನೆಗೆ 1,677 ಕೋಟಿ ರೂ. ಮೀಸಲು

ಬೆಂಗಳೂರು : ಮಹದಾಯಿ ಕಳಸಾ ಬಂಡೂರಿ ನಾಲಾ ತಿರುವು ಯೋಜನೆಗೆ ಬಜೆಟ್‌ನಲ್ಲಿ 1,677 ಕೋಟಿ ರೂ. ಅನುದಾನ ನೀಡುವ ಮೂಲಕ ಮುಖ್ಯಮಂತ್ರಿಗಳು ಉತ್ತರ ಕರ್ನಾಟಕ ಭಾಗದ ರೈತರ ಬೇಡಿಕೆ ಈಡೇರಿಸಿದ್ದಾರೆ.
ಬೆಳಗಾವಿ, ಗದಗ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳ ರೈತರು ಕಳಸಾ ಬಂಡೂರಿ ನಾಲಾ ತಿರುವು ಯೋಜನೆಗೆ ಆಗ್ರಹಿಸಿ ಕಳೆದ 20 ವರ್ಷಗಳಿಂದ ಹೋರಾಟ ನಡೆಸಿಕೊಂಡು ಬರುತ್ತಿದ್ದಾರೆ.
ನ್ಯಾಯಾಧಿಕರಣ ತೀರ್ಪು ಸಹ ಬಂದಿದ್ದು, 13.42 ಟಿಎಂಸಿ ನೀರು ಬಳಸಿಕೊಳ್ಳಲು ರಾಜ್ಯಕ್ಕೆ ಅವಕಾಶ ಸಿಕ್ಕಿದೆ.. ಕೇಂದ್ರ ಸರ್ಕಾರ ಕೂಡ ನೀರು ಬಳಕೆ ಮಾಡಿಕೊಳ್ಳಲು ಗೆಜೆಟ್‌ ನೋಟಿಫಿಕೇಶನ್‌ ಹೊರಡಿಸಿದ ನಂತರ ರಾಜ್ಯ ಸರ್ಕಾರ ಈ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಹಳ್ಳದಲ್ಲಿ ಹರಿಯುವ ನೀರು ಬಳಕೆ ಮಾಡಿಕೊಳ್ಳುವ ಕಾಮಗಾರಿಗೆ 500 ಕೋಟಿ ಮೀಸಲಿಟ್ಟಿತು. ಆದರೆ ಇದುವರೆಗೂ ಕಾಮಗಾರಿ ಪ್ರಾರಂಭ ಮಾಡಿ ನೀರು ಪಡೆದುಕೊಳ್ಳಲು ಮುಂದಾಗಿರಲಿಲ್ಲ.ಈ ಬಾರಿ ಮಂಡನೆಯಾಗುತ್ತಿರುವ ಬಜೆಟ್ ನಲ್ಲಿ ಕಳಸಾ ಕಾಮಗಾರಿಗೆ ಅನುದಾನ ಸಿಗಬಹುದೆನ್ನುವ ನಿರೀಕ್ಷೆ ಈಗ ಈಡೇರಿದೆ. ಯಡಿಯೂರಪ್ಪ 1,677 ಕೋಟಿ ರೂ. ಅನುದಾನ ನೀಡಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ...| ಎಲ್ಲರೆದುರು ಸರ್ಪಕ್ಕೆ ಮುತ್ತಿಕ್ಕಿದ ಭೂಪ...ಆದ್ರೆ ನಂತರ ಆದದ್ದೇ ಬೇರೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement