ರಾಜ್ಯ ಬಜೆಟ್‌: ಮೀನು ಮಾರಾಟ ಘಟಕ-ಮತ್ಸ್ಯ ದರ್ಶನಿ 30 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ

ಬೆಂಗಳೂರು : ವಿಧಾನಸೌಧದಲ್ಲಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯದಲ್ಲಿ ಮೀನಿನ ಮಾರಾಟವನ್ನು ಉತ್ತೇಜಿಸಲು ಹಾಗೂ ಮೀನಿನ ವಿವಿಧ ಪ್ರಭೇದಗಳ ಕುರಿತು ಅರಿವು ಮೂಡಿಸಲು ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ವತಿಯಿಂದ ಮೀನು ಮಾರಾಟ ಘಟಕಗಳು ಹಾಗೂ ಮತ್ಸ ದರ್ಶನಿಗಳನ್ನು 30 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ ಮಾಡುವುದಾಗಿ ಪ್ರಕಟಿಸಿದರು.
ರಾಜ್ಯದ 16 ಮೀನುಮರಿ ಉತ್ಪಾದನಾ ಕೇಂದ್ರಗಳ ಉನ್ನತ್ತೀಕರಣಕ್ಕೆ ಪ್ರಸಕ್ತ ಸಾಲಿನಲ್ಲಿ 2 ಕೋಟಿ ರೂ. ಅನುದಾನ ಒದಗಿಸಲಾಗುವುದು . 2020-21 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಯಡಿ ರಾಜ್ಯದ 137 ಕೋಟಿ ರೂ. ಗಳ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, 2021-22 ನೇ ಸಾಲಿನಲ್ಲಿ 376 ಕೋಟಿ ರೂ. ಕ್ರಿಯಾ ಯೋಜನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದರು.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement