ರಾಜ್ಯ ಬಜೆಟ್‌: ವಿವಿಧ ಧರ್ಮ, ಜಾತಿ ಅಭಿವೃದ್ಧಿ ಮಂಡಳಿಗಳಿಗೆ ೧೫೦೦ ಕೋಟಿ ರೂ.

 

ಬೆಂಗಳೂರು: ವಿವಿಧ ಧರ್ಮ, ಮಠಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ 2021-22ನೇ ಸಾಲಿನ ಬಜೆಟ್‌ನಲ್ಲಿ ಅನುದಾನಗಳನ್ನು ಪ್ರಕಟಿಸಿದ್ದಾರೆ, ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಯಗಳಿಗಾಗಿ 1,500 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕ್ರೈಸ್ತ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂ ಮೀಸಲಿಡಲಾಗಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ 500 ಕೋಟಿ ರೂ ಅನುದಾನ ಘೋಷಿಸಲಾಗಿದೆ. ಒಕ್ಕಲಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದು, ಒಕ್ಕಲಿಗರ ಸರ್ವತೋಮುಖ ಅಭಿವೃದ್ಧಿಗೆ 500 ಕೋಟಿ ರೂ ಅನುದಾನ ನೀಡಲಾಗುವುದು ಎಂದು ಹೇಳಿರುವ ಅವರು ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 50 ಕೋಟಿ ರೂ.ಗಳನ್ನು ನೀಡಿದ್ದಾರೆ.
ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ನೀಡಲಾಗುತ್ತಿದ್ದು, ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಜಗಜ್ಯೋತಿ ಬಸವಣ್ಣ ಜನ್ಮಸ್ಥಳ ಅಭಿವೃದ್ಧಿಗಾಗಿ 5 ಕೋಟಿ ರೂ ನೀಡಲಾಗುವುದು.ಲಿಂಗೈಕ್ಯರಾದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ್ ಶ್ರೀಗಳು ಹಾಗೂ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಗಳ ಸ್ಮೃತಿವನಕ್ಕಾಗಿ 2 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಯಡಿಯೂರಪ್ಪ ಬಜೆಟ್‌ ಮಂಡನೆ ವೇಳೆ ಪ್ರಕಟಿಸಿದ್ದಾರೆ.

ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement