ರಾಜ್ಯ ಬಜೆಟ್: ಕೃಷಿ ಪೂರಕ ಚಟುವಟಿಕೆಗಳಿಗೆ ೩೧೦೨೮ ಕೋಟಿ ರೂ. ಅನುದಾನ

ಬೆಂಗಳೂರು: ೨೦೨೧-೨೨ನೇ ನೇ ಸಾಲಿನ ರಾಜ್ಯ ಬಜೆಟ್​ನಲ್ಲಿ ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ ಸರ್ಕಾರ ೩೧,೦೨೮ ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದೆ. ಅಲ್ಲದೆ, ಸಾವಯವ ಕೃಷಿ ಉತ್ತೇಜನಕ್ಕೆ ೫೦೦ ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆ ಜಾರಿ ಮಾಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆ ಇಟ್ಟಂಗಿಹಾಳ ಗ್ರಾಮದಲ್ಲಿ ಆತ್ಮನಿರ್ಭರ ಭಾರತ ಅಭಿಯಾನ ಯೋಜನೆಯಡಿ ಆಹಾರ ಪಾರ್ಕ್ ಸ್ಥಾಪನೆ, ಕೃಷಿ ವಿವಿಗಳಲ್ಲಿ ರೈತರ ಮಕ್ಕಳಿಗೆ ಇರುವ ಮೀಸಲಾತಿ ಶೇ.50ಕ್ಕೆ ಹೆಚ್ಚಳ. ಆತ್ಮ ನಿರ್ಭರ ಭಾರತ ಅಭಿಯಾನದ ಅಡಿಯಲ್ಲಿ ಆಹಾರ ಸಂಸ್ಕರಣೆ ಹಾಗೂ ಕೊಯ್ಲೋತ್ತರ ನಿರ್ವಹಣಾ ಘಟಕಗಳಿಗೆ ನೀಡುವ ಸಹಾಯಧನವನ್ನು ಶೇ. ೩೫ ರಿಂದ ಶೇ. ೫೦ಕ್ಕೆ ಹೆಚ್ಚಿಸಲು ಸರ್ಕಾರದಿಂದ ಶೇ. 15 ರಷ್ಟು ಹೆಚ್ಚುವರಿ ಸಹಾಯಧನ; ೫೦ಕೋಟಿ ರೂ. ಗಳ ಅನುದಾನ, ಕೃಷಿ ಯಾಂತ್ರೀಕರಣ ಯೋಜನೆಯಡಿ ಸಣ್ಣ ಟ್ಯ್ರಾಕ್ಟರ್‍ಗಳಿಗೆ ನೀಡುತ್ತಿದ್ದ ಸಹಾಯಧನ ೨೫ರಿಂದ ೪೫ ಟ್ಯ್ರಾಕ್ಟರ್‍ಗಳಿಗೆ ವಿಸ್ತರಣೆ ಘೋಷಣೆ, ರೈತ ಉತ್ಪಾದಕರ ಸಂಸ್ಥೆಗಳು ಮಾರಾಟ ಮಾಡುವ ತೋಟಗಾರಿಕೆ ಉತ್ಪನ್ನಗಳಿಗೆ ‘ಬ್ರಾಂಡ್ ವ್ಯಾಲ್ಯೂ’ ಕಲ್ಪಿಸಲು ಹಾಗೂ ಉತ್ತಮ ಮಾರುಕಟ್ಟೆ ಸಂಪರ್ಕ ಒದಗಿಸಲು ಕ್ರಮ ಕೈಗೊಲ್ಳುವ ಪ್ರಸ್ತಾವ, ಕೊಪ್ಪಳ ಜಿಲ್ಲೆಯ ಸಿರಿವಾರ ಗ್ರಾಮದಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ಅಭಿವೃದ್ಧಿ,
ಅಡಿಕೆ ಬೆಳಗಾರರನ್ನು ತೊಂದರೆಗೀಡು ಮಾಡಿರುವ ಹಳದಿ ಎಲೆ ರೋಗದ ಕುರಿತ ಸಂಶೋಧನೆ ಹಾಗೂ ಪರ್ಯಾಯ ಬೆಳೆ ಪ್ರೋತ್ಸಾಹಿಸಲು ೨೫ ಕೋಟಿ ರೂ.ನಿಗದಿ ಪಡಿಸಲಾಗಿದೆ.
ಕಳಸಾ ಬಂಡೂರಿ ತಿರುವು ಯೋಜನೆಗೆ  ೧೬೭೭ ಕೋಟಿ ರೂ. ಅನುದಾನ., ಭದ್ರಾ ಯೋಜನೆಯನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸಲು ಕೇಂದ್ರಕ್ಕೆ ಒತ್ತಾಯ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೆ, 58 ಡ್ಯಾಂಗಳ ಪುನಶ್ಚೇತನಕ್ಕೆ ಕ್ರಮ, ಸೋಮೇಶ್ವರ ಕಡಲ ತೀರ ಅಭಿವೃದ್ಧಿಗೆ ೧೦ ಕೋಟಿ ರೂಪಾಯಿ ಮತ್ತು ವಿಜಯಪುರದಲ್ಲಿ ಫುಡ್ ಪಾರ್ಕ್ ಸ್ಥಾಪನೆ ಪ್ರಸ್ತಾವನೆ, ಚಾಮರಾಜನಗರದಲ್ಲಿ ಅರಿಶಿನ ಮಾರುಕಟ್ಟೆಯ ಸಮಗ್ರ ಅಭಿವೃದ್ಧಿ ಹಾಗೂ ಬಳ್ಳಾರಿಯ ಆಲದಹಳ್ಳಿ ಗ್ರಾಮದಲ್ಲಿ ಅತ್ಯಾಧುನಿಕ ಒಣಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆ ಕುರಿತು ಪ್ರಸ್ತಾಪ ಮಾಡಲಾಗಿದೆ.
ಸುವಾಸನೆಯುಕ್ತ ಮತ್ತು ಗಿಡಗಳು, ಹಣ್ಣು ಹಂಪಲು, ತರಕಾರಿಗಳು ಮತ್ತು ಸಂಬಾರ ಪದಾರ್ಥಗಳಿಗಾಗಿ ಹೊಸ ಕೃಷಿ ರಫ್ತು ವಲಯ ಸ್ಥಾಪನೆ; ತೋಟಗಾರಿಕಾ ಬೆಳೆಗಳ ರಫ್ತಿಗೆ ರಾಜ್ಯದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಪೂರಕ ಸೌಲಭ್ಯ. ಹಣ್ಣು ಮತ್ತು ತರಕಾರಿ ಬೆಳೆಗಳ ಮೌಲ್ಯ ವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ಕಲ್ಪಿಸಲು ಬೆಳೆಗಾರರಿಗೆ ತರಬೇತಿ ಮತ್ತು ತಾಂತ್ರಿಕ ಬೆಂಬಲ ನೀಡುವ ಪ್ರಸ್ತಾವನ್ನು ೨೦೨೧-೨೨ನೇ ಸಾಲಿ ಬಜೆಟ್‌ನಲ್ಲಿ ಮಾಡಲಾಗಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಮತದಾನಕ್ಕೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement