ಸಿಂಧಗಿಯಲ್ಲಿ ಜೆಡಿಎಸ್‌ಗೆ ಬಿಗ್‌ ಶಾಕ್‌ ನೀಡಿದ ಅಶೋಕ ಮನಗೂಳಿ…!

ಚಿತ್ರ ಕೃಪೆ-ಪಬ್ಲಿಕ್‌ ಟಿವಿ

ವಿಜಯಪುರ: ಉಪಚುನಾವಣೆ ಸನಿಹದಲ್ಲಿರುವಾಗಲೇ ಜೆಡಿಎಸ್‌ಗೆ ದೊಡ್ಡ ಶಾಕ್‌ ಆಗಿದೆ.
ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ಮಾಜಿ ಸಚಿವ ದಿ.ಎಂ. ಸಿ.ಮನಗೂಳಿ ಅವರ ಪುತ್ರ ಪಕ್ಷ ತೊರೆಯುವುದಾಗಿ ಪ್ರಕಟಿಸುವುದರ ಮೂಲಕ ಜೆಡಿಎಸ್‌ಗೆ ಬಿಗ್‌ ಶಾಕ್‌ ನೀಡಿದ್ದಾರೆ. ಅವರು ಕಾಂಗ್ರೆಸ್‌ ಸೇರುವುದಾಗಿ ಹೇಳಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಸಿಂಧಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ (85) ಜನವರಿ 28ರಂದು ನಿಧನರಾಗಿದ್ದರು. ಶಾಸಕರ ನಿಧನದಿಂದಾಗಿ ಸಿಂಧಗಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಾಗಿದ್ದು, ಶೀಘ್ರವೇ ಪ್ರಕಟವಾಗುವ ಸಾಧ್ಯತೆಯಿದೆ. ಇದರ ಬೆನ್ನಲ್ಲೇ ದಿ. ಎಂ. ಸಿ. ಮನಗೂಳಿ ಪುತ್ರ ಅಶೋಕ ಮನಗೂಳಿ ಉಪ ಚುನಾವಣೆ ಹತ್ತಿರವಾಗುತ್ತಿರುವಾಗಲೇ ಜೆಡಿಎಸ್ ಪಕ್ಷ ತೊರೆಯುವ ನಿರ್ಧಾರ ಮಾಡಿದ್ದು, ಕಾಂಗ್ರೆಸ್ ಸೇರುವುದಾಗಿ ಅವರು ಘೋಷಣೆ ಮಾಡಿದ್ದಾರೆ. ಮಂಗಳವಾರವೇ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ವರದಿಯಾಗಿದೆ.
ಉತ್ತರ ಕರ್ನಾಟಕದಲ್ಲಿ ತನ್ನ ಬಲವನ್ನು ಹೆಚ್ಚಿಸಿಕೊಳ್ಳಲು ಶತಾಯ-ಗತಾಯ ಪ್ರಯತ್ನಿಸುತ್ತಿರುವ ಜೆಡಿಎಸ್‌ ಪಕ್ಷಕ್ಕೆ ಅಶೋಕ ಮನಗೂಳಿ ಅವರ ಈ ನಿರ್ಧಾರದಿಂದ ತೀವ್ರ ಹಿನ್ನಡೆಯಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್, ಜೆಡಿಎಸ್‌ ಸಿಂಧಗಿ ಉಪ ಚುನಾವಣೆಗೆ ತಯಾರಿ ನಡೆಸಿದ್ದವು. ಅನುಕಂಪದ ಆಧಾರದ ಮೇಲೆ ಕ್ಷೇತ್ರ ಉಳಿಸಿಕೊಳ್ಳಲು ಯೋಚಿಸುತ್ತಿದ್ದ ಜೆಡಿಎಸ್‌ಗೆ ಈ ಬೆಳವಣಿಗೆಯಿಂದ ಹಿನ್ನಡೆಯಾಗಲಿದ್ದು, ಅದು ಹೇಗೆ ಚುನಾವಣೆ ಎದುರಿಸಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆಗಳು ಬಂದ್ ಆಗ್ತವೆ : ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿಕೆ ಚರ್ಚೆಗೆ ಗ್ರಾಸ

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement