ಕರ್ನಾಟಕ, ಉತ್ತರ ಪ್ರದೇಶದಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರದ ತಾತ್ವಿಕ ಒಪ್ಪಿಗೆ

ನವದೆಹಲಿ: ಕರ್ನಾಟಕ, ಉತ್ತರ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂಬ ಮಾಹಿತಿಯನ್ನು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಹೇಳಿದ್ದಾರೆ.
ಸಂಸತ್ ಕಲಾಪದಲ್ಲಿ ಈ ವಿಚಾರವಾಗಿ ಮಾತನಾಡಿರುವ ಕೇಂದ್ರ ಸಚಿವರು, ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಗುಜರಾತ್, ಆಂಧ್ರಪ್ರದೇಶ, ಕರ್ನಾಟಕ, ಉತ್ತರ ಪ್ರದೇಶ, ಬಿಹಾರ, ಹಿಮಾಚಲ ಪ್ರದೇಶ, ಗೋವಾಗಳಿಂದ ಪ್ರಸ್ತಾವನೆಗಳು ಬಂದಿದ್ದವು.

ಸ್ಥಳ, ಅಂದಾಜು ಯೋಜನಾ ವೆಚ್ಚ ಹಾಗೂ ಗಡುವಿನ ದಿನಾಂಕದ ಒಳಗಾಗಿ ಕಾರ್ಯಸಾಧ್ಯತೆಯ ಪ್ರಸ್ತಾವನೆಗಳು ಕರ್ನಾಟಕ, ಉತ್ತರ ಪ್ರದೇಶ, ಬಿಹಾರ ಹಾಗೂ ಹಿಮಾಚಲ ಪ್ರದೇಶಗಳಿಂದ ಬಂದಿತ್ತು. ಈ ಪೈಕಿ ಕರ್ನಾಟಕ ಹಾಗೂ ಉತ್ತರ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಸದಾನಂದ ಗೌಡ ಲಿಖಿತ ಉತ್ತರ ನೀಡಿದ್ದಾರೆ.ಅ
ಕರ್ನಾಟಕದಲ್ಲಿ ಗಂಜಿಮಠ, ದಕ್ಷಿಣ ಕನ್ನಡ ಹಾಗೂ ಉತ್ತರ ಪ್ರದೇಶದ ಗೋರಖ್ ಪುರದಲ್ಲಿ ತಜ್ಞರ ಸಮಿತಿಯ ಶಿಫಾರಸುಗಳನ್ನು ಆಧರಿಸಿ ಪ್ಲಾಸ್ಟಿಕ್ ಪಾರ್ಕ್ ಗಳ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ ನೀಡಲಾಗಿದ್ದು, ಪ್ರಾಥಮಿಕ ಪ್ರಸ್ತಾವನೆಗಳ ಕುರಿತು ತಾಂತ್ರಿಕ ಮೌಲ್ಯಮಾಪನವನ್ನು ನಡೆಸಲಾಗುತ್ತಿದೆ ಎಂದು ಸದಾನಂದ ಗೌಡ ಮಾಹಿತಿ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಕುಮಟಾ: ಭಾರಿ ಮಳೆಗೆ ಗೋಕರ್ಣ–ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement