ನರ ಹಂತಕ ಹುಲಿ ಹಿಡಿಯಲು ೧೫೦ ಅರಣ್ಯ ಸಿಬ್ಬಂದಿ: ಆದರೂ ಕಾಣಿಸದ ಹುಲಿ

ಸಾಂದರ್ಭಿಕ ಚಿತ್ರ

ಮಡಿಕೇರಿ: ನರ ಹಂತಕ ವ್ಯಾಘ್ರನ ಸೆರೆ ವಿಳಂಬವಾಗುತ್ತಿದ್ದು, ಗ್ರಾಮಸ್ಥರ ಆಕ್ರೋಶವೂ ಹೆಚ್ಚಾಗುತ್ತಿದೆ. ಈಗಾಗಲೇ ಮೂರು ಜೀವಗಳನ್ನು ಬಲಿ ಪಡೆದಿರುವ ಗಂಡು ಹುಲಿ ಯಾರ ಕಣ್ಣಿಗೂ ಬೀಳುತ್ತಿಲ್ಲ. ಅರಣ್ಯ ಇಲಾಖೆಯ 150ಕ್ಕೂ ಅಧಿಕ ಸಿಬ್ಬಂದಿ ಹುಲಿ ಸೆರೆ ಹಿಡಿಯಲು ಪ್ರಯತ್ನಿಸುತ್ತಿದ್ದಾರೆ.
ಅರಣ್ಯ ಸಚಿವರಾದ ಅರವಿಂದ ಲಿಂಬಾವಳಿ ಸೋಮವಾರ ಬೆಂಗಳೂರಿನಲ್ಲಿ ಶಾಸಕರಾದ ಕೆ. ಜಿ. ಬೋಪಯ್ಯ, ವನ್ಯಜೀವಿ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೊತೆ ಚರ್ಚೆ ನಡೆಸಿದರು.
50ಕ್ಕೂ ಅಧಿಕ ಸಿಬ್ಬಂದಿ ಹುಡುಕುತ್ತಿದ್ದರೂ ಹುಲಿ ಕಾಣುತ್ತಿಲ್ಲ. ಕತ್ತಲಾದ ಮೇಲೆ ಯಾರೂ ಮನೆಯಿಂದ ಹೊರಗೆ ಬರುತ್ತಿಲ್ಲ. ತೋಟಗಳಲ್ಲಿ ಕೆಲಸ ಮಾಡಲು ಕಾರ್ಮಿಕರೂ ಹಿಂದೇಟು ಹಾಕುತ್ತಿದ್ದಾರೆ.
ಅರಣ್ಯ ಇಲಾಖೆಯ ಪಿಸಿಸಿಎಫ್‌ ಹುಲಿಯ ಚಲನ-ವಲನದ ಮೇಲೆ ನಿಗಾವಹಿಸಲು ಕೇಂದ್ರ ಸರ್ಕಾರದ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಮಾರ್ಗಸೂಚಿಗಳನ್ವಯ ಒಂದು ತಾಂತ್ರಿಕ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಪೊನ್ನಂಪೇಟೆ ವಲಯದಲ್ಲಿ 2021ರ ಮಾರ್ಚ್ 8ರಂದು ಹುಲಿ ದಾಳಿಯಿಂದ ಜನರ ಪ್ರಾಣ ಹಾನಿ ಬಗ್ಗೆ ಕೊಡಗಿನ ಅರಣ್ಯಾಧಿಕಾರಿಗಳು ವರದಿ ಮಾಡಿದ್ದಾರೆ. ಈ ಹುಲಿಯನ್ನು ತಕ್ಷಣವೇ ಸೆರೆ ಹಿಡಿಯುವುದು, ಇದು ಅಸಾಧ್ಯವಾದಲ್ಲಿ ಮಾತ್ರ ಈ ಹುಲಿಯನ್ನು ಗುಂಡಿಕ್ಕುವುದನ್ನು ಕೊನೆಯ ಪ್ರಕ್ರಿಯೆಯನ್ನಾಗಿ ಪರಿಗಣಿಸಲು ಆದೇಶ ನೀಡಿದ್ದಾರೆ.
ಕೊಡಗಿನ ರೈತ ಸಂಘವು ಬೆಳ್ಳೂರು ಹೆದ್ದಾರಿಯಲ್ಲಿ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಅವರ ನೇತೃತ್ವದಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಹುಲಿಯನ್ನು ಸೆರೆ ಅಥವಾ ಗುಂಡಿಕ್ಕಿ ಕೊಲ್ಲುವ ವರೆಗೂ ಧರಣಿ ಮುಂದುವರಿಯಲಿದೆ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement