ಪಶ್ಚಿಮ ಬಂಗಾಳದಲ್ಲಿ ೮ ಹಂತದ ಚುನಾವಣೆ: ಆಯೋಗದ ನಿರ್ಧಾರ ಪ್ರಶ್ನಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್‌

 

ನವ ದೆಹಲಿ: ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ನ್ಯಾಯವಾದಿ ಮನೋಹರ್ ಲಾಲ್ ಶರ್ಮಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರ ನ್ಯಾಯಪೀಠವು ಮಂಗಳವಾರ ವಜಾಗೊಳಿಸಿದೆ.
ನಾವು ನಿಮ್ಮ ಮಾತನು ಒಪ್ಪಲು ಸಾಧ್ಯವಿಲ್ಲ, ನಾವು ಇಡೀ ಪ್ರಕರಣವನ್ನು ನೋಡಿದ್ದೇವೆ. ಈ ಅರ್ಜಿ ವಜಾಗೊಳಿಸಿದ್ದೇವೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.
ಕೇರಳ ಮತ್ತು ತಮಿಳುನಾಡು ಮತ್ತು ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಚುನಾವಣೆಗಳು ನಡೆಯಲಿದೆ. ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಆದರೆ ಪಶ್ಚಿಮ ಬಂಗಾಳದಲ್ಲಿ ಮಾತ್ರ ಎಂಟು ಹಂತದಲ್ಲಿ ಮತದಾನ ನಡೆಯುವುದು ಯಾಕೆ ಎಂದು ಅರ್ಜಿದಾರ ಮನೋಹರ್ ಲಾಲ್ ಶರ್ಮಾ ಸುಪ್ರೋಂ ಕೋರ್ಟಿನಲ್ಲಿ ಪ್ರಶ್ನಿಸಿದ್ದರು.

ಪ್ರಮುಖ ಸುದ್ದಿ :-   ಚಲಾವಣೆಯಾದ ಒಟ್ಟು ಮತದ ಮಾಹಿತಿ 48 ಗಂಟೆಗಳಲ್ಲಿ ಏಕೆ ವೆಬ್‌ಸೈಟ್‌ನಲ್ಲಿ ಹಾಕುತ್ತಿಲ್ಲ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಪ್ರಶ್ನೆ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement