ರಮೇಶ ಜಾರಕಿಹೊಳಿ ಪ್ರಕರಣ: ಬುಕ್ ಆಫ್ ಲಾ ಪ್ರಕಾರ ತನಿಖೆ

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಬುಕ್ ಆಫ್ ಲಾ ಪ್ರಕಾರ ತನಿಖೆ ನಡೆಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರು ಬಂದ ನಂತರ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ಪ್ರಕರಣದ ಎಲ್ಲ ವಿಚಾರಣೆಯೂ ಕಾನೂನು ಪ್ರಕಾರ ನಡೆಯುತ್ತದೆ.ಈ ಪ್ರಕರಣದ ಎಲ್ಲ ಅಂಶವನ್ನೂ ಕಾನೂನು ಪ್ರಕಾರ ತನಿಖೆಗೆ ಒಳಪಡಿಸಲಾಗುವುದು ಎಂದರು.

3 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಗ್ರೀನ್ ಆಸ್ಕರ್ - ಆಶ್ಡನ್‌ ಪ್ರಶಸ್ತಿ : ಸೆಲ್ಕೋ ಸಾಧನೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿನಂದನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement