ರಾಹುಲ್‌ ಗಾಂಧಿಯನ್ನು ಶಾಲೆಗೆ ಕಳಿಸಿ: ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌ ಟೀಕೆ

ನವದೆಹಲಿ: ಕೇಂದ್ರ ಸರಕಾರದ ಅಡಿಯಲ್ಲಿ ಯಾವ ಸಚಿವಾಲಯಗಳು ಅಸ್ತಿತ್ವದಲ್ಲಿವೆ ಎಂಬುದನ್ನು ಕಲಿಯಲು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿಯನ್ನು ಶಾಲೆಗೆ ಕಳಿಸಬೇಕು ಎಂದು ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌ ಟೀಕೆ ಮಾಡಿದ್ದಾರೆ.
ಪ್ರತ್ಯೇಕ ಮೀನುಗಾರಿಕೆ ಸಚಿವಾಲಯವನ್ನು ರಚನೆ ಮಾಡಬೇಕೆಂಬ ರಾಹುಲ್‌ ಗಾಂಧಿ ಹೇಳಿಕೆಯನ್ನು ಟೀಕೆ ಮಾಡಿದ ಕೇಂದ್ರ ಸಚಿವ ಸಿಂಗ್‌, ರಾಹುಲ್ ಗಾಂಧಿಯವರ ಹೇಳಿಕೆಗಳಿಂದಾಗಿ ನನಗೆ ನೋವಾಗಿದೆ. ನಾನು ಅಧಿಕಾರಕ್ಕೆ ಬಂದರೆ, ನಾನು ಮೀನುಗಾರಿಕೆಗಾಗಿ ಪ್ರತ್ಯೇಕ ಸಚಿವಾಲಯವನ್ನು ರಚನೆ ಮಾಡುತ್ತೇನೆ ಎಂದು ರಾಹುಲ್‌ ಹೇಳಿಕೆ ನೀಡಿದ್ದರು ಎಂದು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವರಾಗಿರುವ ಸಿಂಗ್ ಹೇಳಿದರು.
ದಯವಿಟ್ಟು ಕಾಂಗ್ರೆಸ್‌ ನಾಯಕ ರಾಹುಲ್‌ರನ್ನು ಶಾಲೆಗೆ ಕಳುಹಿಸಿ. ಯಾವ ಸಚಿವಾಲಯಗಳು, ಇಲಾಖೆಗಳು ಅಸ್ತಿತ್ವದಲ್ಲಿವೆ ಎಂದು ಹೇಳಿ. ಇಲ್ಲದಿದ್ದರೆ ಯಾವ ಸಚಿವಾಲಯಗಳಿವೆ ಎಂಬುದನ್ನು ಅವರು ಮರೆತುಬಿಡುತ್ತಾರೆ” ಎಂದು ಸಿಂಗ್ ತಿಳಿಸಿದರು. ಕಾಂಗ್ರೆಸ್ ಆಳ್ವಿಕೆಯಲ್ಲಿ ಮೀನುಗಾರಿಕೆ ಕ್ಷೇತ್ರದ ಬೆಳವಣಿಗೆ ಶೇ 5.27 ಇದ್ದರೆ, ಮೋದಿ ಸರ್ಕಾರದ ಅಡಿಯಲ್ಲಿ ಮೀನುಗಾರಿಕೆ ಕ್ಷೇತ್ರದ ಬೆಳವಣಿಗೆ ಶೇ 10.87 ರಷ್ಟಿದೆ ಎಂದು ಅವರು ಹೇಳಿದರು.
ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯವು ಈಗಾಗಲೇ ಅಸ್ತಿತ್ವದಲ್ಲಿದೆ ಎಂದು ಗಮನಸೆಳೆದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಕೇಂದ್ರ ಸಚಿವರು ಮತ್ತು ಬಿಜೆಪಿ ಮುಖಂಡರು ರಾಹುಲ್‌ ಹೇಳಿಕೆಯನ್ನು ಅಪಹಾಸ್ಯ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement