ಅಯೋಧ್ಯೆಯಲ್ಲಿ ಭಗವಾನ್‌ ರಾಮ್ ವಿವಿ ಸ್ಥಾಪನೆಗೆ ಉತ್ತರ ಪ್ರದೇಶ ಸರ್ಕಾರ ಚಿಂತನೆ

ಅಯೋಧ್ಯೆಯಲ್ಲಿ ಭಗವಾನ್ ರಾಮ್ ಹೆಸರಿನ ವಿಶ್ವವಿದ್ಯಾಲ ಸ್ಥಾಪಿಸಲು ಉತ್ತರ ಪ್ರದೇಶ ಸರ್ಕಾರ ಯೋಜಿಸುತ್ತಿದೆ ಎಂದು ವರದಿಯಾಗಿದೆ.
ಪ್ರಸ್ತಾವಿತ ವಾರ್ಸಿಟಿ ಅಧ್ಯಯನಗಳು ಮತ್ತು ನಂಬಿಕೆ, ಧರ್ಮಗ್ರಂಥಗಳು ಮತ್ತು ಭಗವಾನ್ ರಾಮನಿಗೆ ಸಂಬಂಧಿಸಿದ ಧಾರ್ಮಿಕ ಸಂಗತಿಗಳ ಬಗ್ಗೆ ಇದು ಸಂಶೋಧನೆ ನಡೆಸಲಿದ. ಉನ್ನತ ಶಿಕ್ಷಣ ಖಾತೆಯನ್ನೂ ಹೊಂದಿರುವ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಡಾ.ದಿನೇಶ್ ಶರ್ಮಾ, ವಿಶ್ವವಿದ್ಯಾಲಯವು ಭಗವಾನ್ ರಾಮನ ಜೀವನ ಮತ್ತು ತತ್ವವನ್ನು ಜಗತ್ತಿಗೆ ತಿಳಿಸಲಿದೆ ಎಂದು ಹೇಳಿದ್ದಾರೆ.
ವಿಶ್ವವಿದ್ಯಾಲಯವು ಹಿಂದೂ ಧರ್ಮ ಮತ್ತು ಸಂಸ್ಕೃತಿಯ ಅಧ್ಯಯನಗಳ ಕೇಂದ್ರವಾಗಲಿದೆ. ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ರಾಜ್ಯ ಸರ್ಕಾರ ಈ ಹಿಂದೆ ಘೋಷಿಸಿತ್ತು. ಅಯೋಧ್ಯೆಯಲ್ಲಿ ಮತ್ತು ಸುತ್ತಮುತ್ತಲಿನ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಹಲವಾರು ಇತರ ಯೋಜನೆಗಳು ನಡೆಯುತ್ತಿವೆ.ಭಗವಾನ್‌ ರಾಮ್ ವಿಶ್ವವಿದ್ಯಾಲಯವನ್ನು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಖಾಸಗಿ ವಲಯವು ಸ್ಥಾಪಿಸಲಿದೆ ಎಂದು ಹೇಳಲಾಗಿದೆ.ಈ ಪ್ರಸ್ತಾಪವನ್ನು ಅಯೋಧ್ಯೆಯಲ್ಲಿರುವ ಸಂತರು ಸ್ವಾಗತಿಸಿದ್ದಾರೆ. ವಿಶ್ವವಿದ್ಯಾನಿಲಯದ ಪ್ರಸ್ತಾಪವನ್ನು ಶ್ಲಾಘಿಸಿದ ರಾಮ್ ದೇವಾಲಯದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್, ಹಿಂದೂ ಸಂಸ್ಕೃತಿಯ ಬಗ್ಗೆ ತಿಳಿಯಲು ವಿಶ್ವವಿದ್ಯಾಲಯವು ಯುವ ಪೀಳಿಗೆಗೆ ಮಾಧ್ಯಮವಾಗಲಿದೆ ಎಂದು ಹೇಳಿದರು. ಮಹಂತ್ ಪರಮಹಂಸ ಈ ಪ್ರಸ್ತಾಪವನ್ನು ಶ್ಲಾಘಿಸಿದ್ದಾರೆ. ಮತ್ತು ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರಗಳನ್ನು ಬರೆದಿರುವುದಅಗಿ ತಿಳಿಸಿದ್ದಾರೆ.ಇನ್ನೂ ಮೂರು ವಿಶ್ವವಿದ್ಯಾಲಯಗಳು ರಾಜ್ಯದಲ್ಲಿ ಬರಲಿವೆ.ಅಲಿಗಡ, ಸಹರಾನ್‌ಪುರ ಮತ್ತು ಅಜಮ್‌ಗಡದಲ್ಲಿ ತಲಾ ಒಂದು ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ, ವಿಶ್ವವಿದ್ಯಾಲಯಗಳನ್ನು ನಿರ್ಮಿಸುವ ಪ್ರಕ್ರಿಯೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಅಲ್ಲದೆ, ರಾಜ್ಯವನ್ನು ಶಿಕ್ಷಣ ಕೇಂದ್ರವನ್ನಾಗಿ ಪರಿವರ್ತಿಸುವ ಪ್ರಯತ್ನದಲ್ಲಿ, ಕ್ರೀಡಾ ವಿಶ್ವವಿದ್ಯಾಲಯ ಸೇರಿದಂತೆ ಹಲವಾರು ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಯೋಜಿಸುತ್ತಿದೆ. “ಇದಲ್ಲದೆ ರಾಜ್ಯದಲ್ಲಿ ಕ್ರೀಡಾ ವಿಶ್ವವಿದ್ಯಾಲಯ, ಆಯುಷ್ ವಿಶ್ವವಿದ್ಯಾಲಯ ಮತ್ತು ಕಾನೂನು ವಿಶ್ವವಿದ್ಯಾಲಯವನ್ನೂ ಸ್ಥಾಪಿಸಲಾಗುವುದು ಎಂದು ಡಾ.ಶರ್ಮಾ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಮೋದಿ, ರಾಹುಲ್ ಗಾಂಧಿಯಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಉತ್ತರ ನೀಡಲು ಚುನಾವಣಾ ಆಯೋಗ ಸೂಚನೆ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement