ರಮೇಶ ಜಾರಕಿಹೊಳಿ ಸಿಡಿ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ: ಬೊಮ್ಮಾಯಿ

ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣ ಕುರಿತು ಕೂಲಂಕಷ ವಿಚಾರಣೆ ನಡೆಸಲು ವಿಶೇಷ ತನಿಖಾ ತಂಡ ರಚನೆ ಮಾಡುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮಾಜಿ ಸಚಿವ ರಮೇಶ ಜಾರಕಿಹೊಳಿ ನನಗೆ ಪತ್ರ ಬರೆದು, ತಮ್ಮ ವಿರುದ್ಧ ರಾಜಕೀಯ ತೇಜೋವಧೆ ಹಾಗೂ ಮಾನಹಾನಿ ಮಾಡುವ ಉದ್ದೇಶವಿದ್ದು, ಷಡ್ಯಂತ್ರ ರೂಪಿಸಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಸಮರ್ಪಕ ತನಿಖೆ ನಡೆಸಬೇಕೆಂದು ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಮಾರ್ಚ್‌ ೨ರಂದು ಅರ್ಜಿ ಸಲ್ಲಿಸಿದ್ದನ್ನು ಪತ್ರದಲ್ಲಿ ತಿಳಿಸಿದ್ದಾರೆ.

ಷಡ್ಯಂತ್ರ ರೂಪಿಸಿರುವ ಬಗ್ಗೆ ಹಾಗೂ ಅದರ ಹಿಂದಿರುವ ವ್ಯಕ್ತಿಗಳ ಬಗ್ಗೆ ಕೂಲಂಕಷವಾಗಿ ವಿಚಾರಣೆ ನಡೆಸಲು ಒಂದು ತನಿಖಾ ತಂಡ ರಚನೆ ಮಾಡಲಾಗುವುದು. ಎಡಿಜಿಪಿ ಸೌಮೆಂದು ಮುಖರ್ಜಿ ಅವರಿಗೆ ತಂಡದ ನೇತೃತ್ವ ವಹಿಸಲಾಗುವುದು. ಮುಂದಿನ ಕ್ರಮಕ್ಕಾಗಿ ಈ ಬಗ್ಗೆ ಸಂಪೂರ್ಣ ವರದಿಯನ್ನು ಸರಕಾರಕ್ಕೆ ನೀಡುವಂತೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಬೊಮ್ಮಾಯಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement