ದೇವೇಗೌಡರು ಬೆಳೆಸಿದವರೆಲ್ಲ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ: ಎಚ್‌ಡಿಕೆ

ಮೈಸೂರು: ಅಧಿಕಾರ ಅನುಭವಿಸಿ ನಂತರ ಪಕ್ಷ ಬಿಟ್ಟು ಹೋಗುವುದು ದೇವೇಗೌಡರ ಕುಟುಂಬಕ್ಕೆ ಹೊಸದೇನು ಅಲ್ಲ, ದೇವೇಗೌಡರು ಯಾರ್ಯಾರನ್ನೆಲ್ಲ ಬೆಳೆಸಿದ್ದರೋ ಅವರೇ ಬೆನ್ನಿಗೇ ಚೂರಿ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಬಾಗಿಲು ತೆರೆದುಕೊಂಡೇ ಇದೆ. ಹೀಗಾಗಿ ಹೋಗುವವರು ಹೋಗಬಹುದು, ಬರುವವರು ಬರಬಹುದು. ಪಕ್ಷ ಬಿಡುವವರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಹಳಬರು ಪಕ್ಷ ಬಿಟ್ಟು ಹೋದರೆ ಹೊಸಬರು ಪಕ್ಷಕ್ಕೆ ಬರುತ್ತಾರೆ. ಮಧು ಬಂಗಾರಪ್ಪ ಪಕ್ಷ ತೊರೆಯುವುದು ಹಳೆಯ ವಿಚಾರ.ಅದರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಅಧಿಕಾರ ಉಂಡು ಬೆನ್ನಿಗೆ ಚೂರಿ ಹಾಕುವುದು ಹೊಸದೇನಲ್ಲ.ಯಾರು ಹೋಗಲಿ ಬಿಡಲಿ ಪಕ್ಷಕ್ಕೇನು ನಷ್ಟವಿಲ್ಲ. ಅವರಿಗೆ ಲಾಭ ಆಗುತ್ತದೆ ಎಂದು ಶಿಸ್ತು ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು. ನಂತರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement