ಭಾರತದ ಆಕ್ಷೇಪದ ನಡುವೆಯೂ ಬ್ರಹ್ಮಪುತ್ರ ನದಿಗೆ ಅಣೆಕಟ್ಟುನಿರ್ಮಾಣಕ್ಕೆ ಚೀನಾ ಸಂಸತ್ತು ಒಪ್ಪಿಗೆ

ಟಿಬೆಟ್ ಪ್ರದೇಶದಲ್ಲಿ ಬ್ರಹ್ಮಪುತ್ರ ನದಿಗೆ ಅಣೆಕಟ್ಟು ಕಟ್ಟುವ ಯೋಜನೆಗೆ ಚೀನಾ ಸಂಸತ್ತು ಅನುಮೋದನೆ ನೀಡಿದೆ.
ಕಳೆದ ವರ್ಷ ಕಮ್ಯುನಿಸ್ಟ್‌ ಪಕ್ಷದ ಸಭೆಯಲ್ಲಿ ಪ್ರಸ್ತಾಪವಾಗಿದ್ದ ಯೋಜನೆಗಳನ್ನು ಗುರುವಾರ (ಮಾ.೧೧) ಚೀನಾದ ಸಂಸತ್ತಿನಲ್ಲಿ ಮಂಡಿಸಲಾಯಿತು.
ನ್ಯಾಷನಲ್ ಪೀಪಲ್ಸ್ ಕಾಂಗ್ರೆಸ್ ಎಂದು ಹೇಳಲ್ಪಡುವ ಚೀನಾದ ಸಂಸತ್ ಗುರುವಾರ 14ನೇ ಪಂಚವಾರ್ಷಿಕ ಯೋಜನೆಗೆ ಅನುಮೋದನೆ ನೀಡಿದ್ದು, ಇದರಲ್ಲಿ ಬ್ರಹ್ಮಪುತ್ರ ನದಿಗೆ ಅಣೆಕಟ್ಟು ಕಟ್ಟುವ ವಿವಾದಿತ ಯೋಜನೆಯೂ ಸೇರಿದೆ.
ಈ ಯೋಜನೆಗೆ ಭಾರತ ಹಾಗೂ ಬಾಂಗ್ಲಾದೇಶ ಆಕ್ಷೇಪ ವ್ಯಕ್ತಪಡಿಸಿದೆ. ಆದರೆ, ಇದನ್ನು ಉಭಯ ದೇಶಗಳ ಆತಂಕವನ್ನು ಗಮನದಲ್ಲಿಟ್ಟುಕೊಳ್ಳಲಾಗುವುದು ಎಂದು ತಿಳಿಸಿದೆಯೇ ಹೊರತು ಬ್ರಹ್ಮಪುತ್ರ ನದಿಗೆ ಅಣೆಕಟ್ಟುವುದಕ್ಕೆ ಮುಂದಾಗಿದೆ. ಟಿಬೆಟ್ ಪ್ರದೇಶದಲ್ಲಿ ಬ್ರಹ್ಮಪುತ್ರ ನದಿಗೆ ಅಣೆಕಟ್ಟು ಕಟ್ಟಿ ಜಲವಿದ್ಯುತ್ ಯೋಜನಾ ಕಾಮಗಾರಿಗೆ ಚಾಲನೆ ನೀಡುವ ಬಗ್ಗೆ ತಿಳಿಸಲಾಗಿದೆ.

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement