ಕೊಯಮತ್ತೂರಿನಿಂದ ಕಮಲ್‌ ಹಾಸನ್‌ ಸ್ಪರ್ಧೆ

ಚೆನ್ನೈ: ಖ್ಯಾತ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಮೊದಲ ಬಾರಿಗೆ ಚುನಾವನೆಯಲ್ಲಿ ಸ್ಪರ್ಧಿಸುತ್ತಿದ್ದು, ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಶುಕ್ರವಾರ (ಮಾ.೧೨) ತಮ್ಮ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಮಕ್ಕಳ್ ನೀಧಿ ಮೈಯಂ(ಎಂಎನ್‌ಎಂ) ಅಧ್ಯಕ್ಷ ಕಮಲ್ ಹಾಸನ್ , ತಮ್ಮ ತಂದೆ ದಿ. ಶ್ರೀನಿವಾಸನ್ ಅವರನ್ನು ನೆನಪಿಸಿಕೊಂಡರು. ಈ ಕ್ಷೇತ್ರದ ಜನರು ತಮಗೆ ಮತ ಚಲಾಯಿಸಿದರೆ ವಿಧಾನಸಭೆಯಲ್ಲಿ ಅವರ ಅಭಿಪ್ರಾಯಗಳನ್ನು ಮಂಡಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ನನ್ನ ತಂದೆ ನಾನು ಐಎಎಸ್ ಅಧಿಕಾರಿಯಾಗಬೇಕು ಎಂದು ಆಸೆ ಪಟ್ಟಿದ್ದರು. ಆದರೆ ನಾನು ಸಿನಿಮಾ ಕ್ಷೇತ್ರ ಆಯ್ಕೆ ಮಾಡಿಕೊಂಡೆ. ಈಗ ನನ್ನ ಪಕ್ಷದಲ್ಲಿ ಹಲವು ನಿವೃತ್ತ ಐಎಎಸ್ ಅಧಿಕಾರಿಗಳಿದ್ದಾರೆ. ಇದು ನನಗೆ ಹೆಮ್ಮೆಯ ವಿಚಾರ ಎಂದು ಅವರು ಹೇಳಿದರು.

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement