ಕೊವ್ಯಾಕ್ಸಿನ್‌ ಮೊದಲ ಡೋಸ್‌ ಪಡೆದ ಸಿಎಂ ಬಿಎಸ್‌ವೈ

ಬೆಂಗಳೂರು; ನಗರದ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿರುವ ಪಿಎಸ್​ಎಸ್​ವೈ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಶುಕ್ರವಾರ ಕೊವಿಡ್‌ ಲಸಿಕೆಯ ಮೊದಲ ಡೋಸ್‌ ಪಡೆದರು.
ಮುಖ್ಯಮಂತ್ರಿಗಳ‌ ಜತೆ ಆರೋಗ್ಯ ಸಚಿವ ಸುಧಾಕರ್ ಕೂಡ ಲಸಿಕೆ ಹಾಕಿಸಿಕೊಂಡರು.
ಲಸಿಕೆ ಹಾಕಿಸಿ ಕೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಲಸಿಕೆ ಹಾಕಿಸಿಕೊಂಡರೆ ಯಾವುದೇ ಸಮಸ್ಯೆ ಆಗುವುದಿಲ್ಲ. ನಾನು ದೇಸಿ ಲಸಿಕೆ ಕೋವಾಕ್ಸಿನ್ ಲಸಿಕೆ ಹಾಕಿಸಿಕೊಂಡಿದ್ದೇನೆ. ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ. ಯಾವುದೇ ಸೈಡ್ ಎಫೆಕ್ಟ್ ಇಲ್ಲ. ಲಸಿಕೆ ಹಾಕಿಸಿಕೊಂಡ ಬಳಿಕ ಇಪ್ಪತ್ತು ನಿಮಿಷ ಕೂರಲು ವೈದ್ಯರು ಹೇಳುತ್ತಾರೆ ಅಷ್ಟೇ ಎಂದು ಹೇಳಿದರು.
ಡಾ. ಸುಧಾಕರ್, ರಾಜ್ಯದಲ್ಲಿ ಕೊರೊನಾ ಪ್ರಕರಣದಲ್ಲಿ ಹೆಚ್ಚಳವಾಗಿದೆ ಎಂದರು. ಈ ನಿಟ್ಟಿನಲ್ಲಿ ಶೀಘ್ರವೇ ಮುಖ್ಯಮಂತ್ರಿಗಳು ಎಲ್ಲ ಜಿಲ್ಲಾಧಿಕಾರಿಗಳ ಜೊತೆ ವಿಡೊಯೀ ಕಾನ್ಫರೆನ್ಸ್ ಮಾಡಲಿದ್ದು, ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಸೂಚನೆ ಕೊಡಲಿದ್ದಾರೆ ಎಂದರು.
ರಾಜ್ಯದಲ್ಲಿ ಬಿಗಿ ಕ್ರಮ ಬೇಕಾಗಿದೆ. ಹೀಗಾಗಿ ಮುಖ್ಯಮಂತ್ರಿಗಳು ವಿಡಿಯೋ ಕಾನ್ಪೆರೆನ್ಸ್ ಮೂಲಕ ಜಿಲ್ಲಾಧಿಕಾರಿಗಳಿಗೆ ಈ ನಿಟ್ಟಿನಲ್ಲಿ ಸೂಚನೆ ಕೊಡಲಿದ್ದಾರೆ. ನೈಟ್ ಕರ್ಪ್ಯೂ ವಿಧಿಸುವ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಆಲೋಚನೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕರಣದ ಹಿಂದೆ ಡಿಕೆ ಶಿವಕುಮಾರ ಕೈವಾಡ : ವಕೀಲ ದೇವರಾಜೇಗೌಡ ಗಂಭೀರ ಆರೋಪ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement