ಖಾಸಗೀಕರಣ-ವಿಲೀನಕ್ಕೆ ವಿರೋಧ: ಮಾರ್ಚ್ 15ರಿಂದ ಎರಡು ದಿನಗಳ ಬ್ಯಾಂಕ್‌ ಮುಷ್ಕರ,

ಸರ್ಕಾರಿ ಸ್ವಾಮ್ಯದ ಎರಡು ಬ್ಯಾಂಕ್‌ಗಳ ಖಾಸಗೀಕರಣಗೊಳಿಸುವ ತೀರ್ಮಾನ ವಿರೋಧಿಸಿ ಮಾರ್ಚ್ 15 ಹಾಗೂ 16ರಂದು ಹಲವಾರು ಬ್ಯಾಂಕ್ ಒಕ್ಕೂಟಗಳು ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಿದ್ದು ಬ್ಯಾಂಕ್‌ ವ್ಯವಹಾರಗಳು ವ್ಯತ್ಯಯಗೊಳ್ಳುವ ಸಾದ್ಯತೆಯಿದೆ.
ಎಸ್ ಬಿ ಐ ನೇತೃತ್ವದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಈ ಮುಷ್ಕರಕ್ಕೆ ಕರೆ ನೀಡಿದೆ.
ಇತ್ತೀಚಿಗೆ ನಡೆದ ಸರ್ಕಾರ ಹಾಗೂ ಒಕ್ಕೂಟಗಳ ಸಂಧಾನ ಸಭೆಯಲ್ಲಿ ಯಾವುದೇ ಪರಿಹಾರ ಕಾಣದ ಕಾರಣ ಒಕ್ಕೂಟವು ಮುಷ್ಕರ ನಡೆಸಲು ನಿರ್ಧರಿಸಿದೆ. ಬ್ಯಾಂಕ್‌ ಖಾಸಗೀಕರಣದ ಸರ್ಕಾರದ ನೀತಿ ವಿರೋಧಿಸಿ 10 ಲಕ್ಷ ಬ್ಯಾಂಕ್ ನೌಕರರು ಮಾರ್ಚ್ 15 ಮತ್ತು 16 ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ. ಸರ್ಕಾರವು ಈಗಾಗಲೇ ಐಡಿಬಿಐ ಬ್ಯಾಂಕ್‌ನ ಬಹುಪಾಲು ಶೇರನ್ನು ಎಲ್‌ಐಸಿಗೆ 2019 ರಲ್ಲಿ ಮಾರಾಟ ಮಾಡಿತ್ತು. ಖಾಸಗೀಕರಣಗೊಳಿಸಿದೆ. ಕಳೆದ ನಾಲ್ಕು ವರ್ಷಗಳಲ್ಲಿ 14 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ವಿಲೀನಗೊಳಿಸಿದೆ.
ಕೇಂದ್ರ ಬಜೆಟ್‌ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಎರಡು ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವುದಾಗಿ ಪ್ರಕಟಿಸಿದದ ನಂತರ ಕೇಂದ್ರ ಸರ್ಕಾರದ ಈ ನೀತಿ ವಿರುದ್ಧಬ್ಯಾಂಕ್ ಒಕ್ಕೂಟಗಳು ಕರೆ ನೀಡಿರುವ ಮುಷ್ಕರದಿಂದಾಗಿ ಬ್ಯಾಂಕ್‌ ವ್ಯವಹಾರಗಳಿಗೆ ತೊಂದರೆಯಾಗದಂತೆ ಬ್ಯಾಂಕ್ ಶಾಖೆಗಳು ಮತ್ತು ಕಚೇರಿಗಳ ಸುಗಮ ಕಾರ್ಯನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿವೆ. ಯಾಕೆಂದರೆ ಮಾ.೧೩ ಹಾಗೂ ೧೪ರಂದು ಬ್ಯಾಂಕಿಗೆ ರಜೆಯಿದ್ದು, ಮಾ.೧೫ ಹಾಗೂ ೧೬ರಂದು ಮುಷ್ಕರ ನಡೆಯಲಿದೆ. ಹೀಗಾಗಿ ಸತತ ನಾಲ್ಕು ದಿನಗಳ ಕಾಲ ವ್ಯವಹಾರಕ್ಕೆ ತೊಂದರೆಯಾಗುವುದರಿಂದ ಬ್ಯಾಂಕ್‌ಗಳು ಗ್ರಾಹಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಪ್ರಯತ್ನ ನಡೆಸಿವೆ.
ಈ ಮುಷ್ಕರಕ್ಕೆ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ), ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಎಐಬಿಒಸಿ), ಬ್ಯಾಂಕ್ ನೌಕರರ ರಾಷ್ಟ್ರೀಯ ಒಕ್ಕೂಟ (ಎನ್‌ಸಿಬಿಇ), ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ (ಎಐಬಿಒಎ), ಬ್ಯಾಂಕ್ ನೌಕರರ ಒಕ್ಕೂಟ (ಬಿಇಎಫ್‌ಐ), ಇಂಡಿಯನ್ ನ್ಯಾಷನಲ್ ಬ್ಯಾಂಕ್ ನೌಕರರ ಒಕ್ಕೂಟ (ಐಎನ್‌ಬಿಇಎಫ್), ಭಾರತೀಯ ರಾಷ್ಟ್ರೀಯ ಬ್ಯಾಂಕ್ ಅಧಿಕಾರಿಗಳ ಕಾಂಗ್ರೆಸ್ (ಐಎನ್‌ಬಿಒಸಿ), ಬ್ಯಾಂಕ್ ಕಾರ್ಮಿಕರ ರಾಷ್ಟ್ರೀಯ ಸಂಸ್ಥೆ (ಎನ್‌ಒಬಿಡಬ್ಲ್ಯೂ), ಬ್ಯಾಂಕ್ ಅಧಿಕಾರಿಗಳ ರಾಷ್ಟ್ರೀಯ ಸಂಸ್ಥೆ (ನೊಬೊ), ಅಖಿಲ ಭಾರತ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟಗಳು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದು, ಬೆಂಬಲ ಮುಷ್ಕರದಲ್ಲಿ ಭಾಗಿಯಾಗುವುದಾಗಿ ತಿಳಿಸಿವೆ.

ಪ್ರಮುಖ ಸುದ್ದಿ :-   ವೀಡಿಯೊ..| ರಾಷ್ಟ್ರದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಆದ್ಯತೆ ; ಮನಮೋಹನ ಸಿಂಗ್ ಹಳೆಯ ವೀಡಿಯೊ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ ಬಿಜೆಪಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement