ತಮಿಳುನಾಡು ಚುನಾವಣೆ: ಡಿಎಂಕೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಏ.೬ರಂದು ನಡೆಯಲಿದ್ದು, ಡಿಎಂಕೆ ಪಕ್ಷವು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ಡಿಎಂಕೆ ಅಧ್ಯಕ್ಷ ಎಂ. ಕೆ. ಸ್ಟಾಲಿನ್, ತಾವು ಮತ್ತೊಮ್ಮೆ ಕೊಲತ್ತೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದೇನೆ ಎಂದು ತಿಳಿಸಿದ್ದಾರೆ. ಅವರ ಪುತ್ರ ಉದ್ಯಾನಿಧಿ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಚೆಪಾಕ್-ಟ್ರಿಪ್ಲಿಕೇನ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.
೧೭೩ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿರುವ ಸ್ಟಾಲಿನ್, ದೊರೈ ಮುರುಗನ್, ಕೆ.ಎನ್. ನೆಹರು ಮತ್ತಿತರ ಬಹುತೇಕ ಹಾಲಿ ಶಾಸಕರು ಮತ್ತು ಮಾಜಿ ಸಚಿವರಿಗೆ ಟಿಕೆಟ್ ನೀಡಲಾಗಿದೆ.
ಮಾ.೧೫ ರಂದು ಸ್ಟಾಲಿನ್‌ ನಾಮಪತ್ರ ಸಲ್ಲಿಕೆ ಮಾಡಲಿದ್ದು, ನಂತರ ಪ್ರಚಾರ ಕಾರ್ಯ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
೨೦೧೧ರಿಂದಲೂ ಅಧಿಕಾರದಿಂದ ಹೊರಗೆ ಇರುವ ಡಿಎಂಕೆ, ಮತ್ತೆ ಅಧಿಕಾರಕ್ಕೆ ಬರಲು ಶತಾಯ-ಗತಾಯ ಪ್ರಯತ್ನ ನಡೆಸಿದೆ. ಒಟ್ಟು ೨೩೪ ಕ್ಷೇತ್ರಗಳ ತನ್ನ ಮಿತ್ರಪಕ್ಷಗಳಿಗೆ ೬೧ ಕ್ಷೇತ್ರಗಳನ್ನು ಡಿಎಂಕೆ ನೀಡಿದೆ.

ಪ್ರಮುಖ ಸುದ್ದಿ :-   ಅಮೆರಿಕ ಮಾದರಿಯಲ್ಲಿ ಭಾರತದಲ್ಲೂ 50% ಉತ್ತರಾಧಿಕಾರ ತೆರಿಗೆ : ಸ್ಯಾಮ್ ಪಿತ್ರೊಡಾ ಹೇಳಿಕೆಯಿಂದ ವಿವಾದ ; ಬಿಜೆಪಿ ವಾಗ್ದಾಳಿ, ಇದು ನಮ್ಮ ಕಲ್ಪನೆಯಲ್ಲ ಎಂದ ಕಾಂಗ್ರೆಸ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement