ನಾನು ಗುರುವಾರದಿಂದಲೇ ಕಾಂಗ್ರೆಸ್‌ ಕಾರ್ಯಕರ್ತನಾಗಿ ಕೆಲಸ ಆರಂಭಿಸಿದ್ದೇನೆ

ಬೆಂಗಳೂರು: ನಾನು ಗುರುವಾರದಿಂದಲೇ ಕಾಂಗ್ರೆಸ್ ಕಾರ್ಯಕರ್ತನಾಗಿ ಕೆಲಸ ಶುರು ಮಾಡಿದ್ದೇನೆ ಎಂದು ಮಧು ಬಂಗಾರಪ್ಪ ಹೇಳಿದರು.
ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಗುರುವಾರದಿಂದಲೇ ಕಾಂಗ್ರೆಸ್ ಕಾರ್ಯಕರ್ತನಾಗಿ ಕೆಲಸ ಶುರು ಮಾಡಿದ್ದೇನೆ. ಅಧಿಕೃತವಾಗಿ ಸೇರ್ಪಡೆಯಾಗುವುದು ಬಾಕಿ ಇದೆ. ಒಂದು ವರ್ಷ ಕಾಲ ನಿರ್ಧಾರ ತೆಗೆದುಕೊಳ್ಳಲು ಸಾಕಷ್ಟು ಯೋಚಿಸಿದ್ದೇನೆ. ಗುರುವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದೇನೆ ಎಂದು ತಿಳಿಸಿದರು.ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ನಿನ್ನೆಯಿಂದಲೇ ಕಾಂಗ್ರೆಸ್ ಕಾರ್ಯಕರ್ತನಾಗಿ ಕೆಲಸ ಆರಂಭಿಸಿದ್ದೇನೆ. ಯಾರಾದರೂ ನೀವು ಈಗ ಯಾವ ಪಕ್ಷದಲ್ಲಿದ್ದೀರಿ ಎಂದು ಪ್ರಶ್ನೆ ಮಾಡಿದರೆ ನನಗೆ ಮುಜುಗರವಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.
ತಮ್ಮ ಸಹೋದರಿ ಗೀತಾ ಶಿವರಾಜ್‍ಕುಮಾರ್ ಜೊತೆಯೂ ಮಾತುಕತೆ ನಡೆಸಿದ್ದೇನೆ. ಅವರು ಕಾಂಗ್ರೆಸ್ ಸೇರ್ಪಡೆ ಯಾಗಲು ಸಹಮತ ವ್ಯಕ್ತಪಡಿಸಿದ್ದಾರೆ. ಅವರು ಕಾಂಗ್ರೆಸ್‍ಗೆ ಸೇರಲು ಸಿದ್ಧರಿದ್ದಾರೆ.ಅಂತಿಮ ಸುತ್ತಿನ ಚರ್ಚೆಯ ಬಳಿಕ ಅಧಿಕೃತವಾಗಿ ಪ್ರಕಟಣೆ ಮಾಡುವುದಾಗಿ ಮಾಜಿ ಶಾಸಕ ಮಧುಬಂಗಾರಪ್ಪ ಹೇಳಿದ್ದಾರೆ.
ಡಿ.ಕೆ.ಶಿವಕುಮಾರ್ ಮಾತನಾಡಿ, ಗೀತಾ ಶಿವರಾಜ್‍ಕುಮಾರ್ ಅವರು ಅತ್ಯಂತ ಗೌರವಾನ್ವಿತ ಹೆಣ್ಣುಮಗಳು. ನಾವು ಅವರನ್ನು ತುಂಬಾ ಗೌರವದಿಂದಲೇ ನಡೆಸಿಕೊಳ್ಳಬೇಕು. ಹೀಗಾಗಿ ಚರ್ಚೆಗಳು ಪೂರ್ಣಗೊಂಡ ನಂತರ ಅಧಿಕೃತವಾಗಿ ಪ್ರಕಟಿಸುತ್ತೇವೆ ಎಂದರು.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement