ನಾಯಕತ್ವ ಬದಲಾವಣೆ: ಊಹಾಪೋಹಕ್ಕೆ ತೆರೆ ಎಳೆದ ಡಿಸಿಎಂ

ನವ ದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಕೇಂದ್ರ ಸಚಿವರಾದ ಸದಾನಂದಗೌಡರು ನನ್ನ ಮೇಲಿನ ಪ್ರೀತಿಯಿಂದಾಗಿ, ನಾನು ಮುಖ್ಯಮಂತ್ರಿಯಾಗಲಿ ಎಂದು ಹೇಳಿರಬಹುದು. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಸದಾನಂದಗೌಡರು ಉದ್ದೇಶಪೂರ್ವಕವಾಗಿ ಹೇಳಿದ್ದಲ್ಲ, ಆಕಸ್ಮಿಕವಾಗಿ ಆ ಮಾತನ್ನು ಹೇಳಿದ್ದಾರೆ. ಅದಕ್ಕೆ ಏನೇನೊ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಮುಂದುವರಿಯಲಿದ್ದಾರೆ ಎಂದು ಹೈಕಮಾಂಡ್ ಸ್ಪಷ್ಟಪಡಿಸಿದ್ದು, ಬದಲಾವಣೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು..
ಯಡಿಯೂರಪ್ಪ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರ ಮುನ್ನೆಡೆಸುತ್ತಿದ್ದಾರೆ. ಇತ್ತೀಚೆಗೆ ಮಂಡಿಸಿದ ಬಜೆಟ್‍ನಲ್ಲಿ ಒಂದೇ ಒಂದು ಪೈಸೆ ತೆರಿಗೆಯನ್ನು ವಿಧಿಸಿಲ್ಲ ಎಂದರು.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement