ಪಂಚಮಸಾಲಿ ೨ಎಗೆ ಸೇರ್ಪಡೆ: ಮಾ.೨೨ರಂದು ಸಾಕ್ಷ್ಯಾಧಾರ ಸಲ್ಲಿಸಲು ಕೂಡಲಸಂಗಮ ಶ್ರೀ -ವಚನಾನಂದ ಶ್ರೀಗಳಿಗೆ ಆಯೋಗದಿಂದ ಪತ್ರ

ಬೆಂಗಳೂರು: ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ೨ಎಗೆ ಸೇರ್ಪಡೆ ಮಾಡುವ ಕುರಿತು ಶ್ರೀ ಜಯ ಬಸವ ಮೃತ್ಯುಂಜಯ ಸ್ವಾಮಿಗಳು ಹಾಗೂ   ವಚನಾನಂದ ಶ್ರೀಗಳಿಗೆ ದಾಖಲೆಗಳನ್ನು ನೀಡುವಂತೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಪತ್ರ ಬರೆದಿದೆ.

ಮಾಚ್೯ ೨೨ ರಂದು ( ಸೋಮವಾರ) ಸೂಕ್ತ ಸಾಕ್ಷ್ಯಾಧಾರಗಳನ್ನು ಆಯೋಗಕ್ಕೆ ನೀಡಬೇಕೆಂದು ಕೂಡಲಸಂಗಮದ ಜಯ ಬಸವ ಮೃತ್ಯುಂಜಯ ಶ್ರೀಗಳು ಹಾಗೂ ಹರಿಹರ ಪೀಠದ ಶ್ರೀ ವಚನಾನಂದ ಮಹಾಸ್ವಾಮೀಜಿಗಳಿಗೆ  ಪತ್ರ ಬರೆದಿರುವುದು ‘ ಸಕಾರಾತ್ಮಕ’ ಬೆಳವಣಿಗೆ ಎಂದು  ಇದನ್ನು ಸಚಿವರಾದ ಮುರುಗೇಶ್ ನಿರಾಣಿ ಹಾಗೂ ಸಿ.ಸಿ.ಪಾಟೀಲ್ಹೇಳಿದ್ದು, ಸ್ವಾಗತಿಸಿದ್ದಾರೆ.
ಹಿಂದುಳಿದ ವರ್ಗಗಳ ಆಯೋಗದ ಕಾರ್ಯದರ್ಶಿಯವರು ಪತ್ರ ಬರೆದು ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ೨ಎಗೆ ಸೇರ್ಪಡೆ ಮಾಡುವ ಬಗ್ಗೆ ತಮ್ಮಲ್ಲಿ ಯಾವುದೇ ರೀತಿಯ ದಾಖಲೆಗಳು ಇದ್ದರೆ, ಖುದ್ದು ಹಾಜರಾಗಿ ಇಲ್ಲವೇ ಸಂಬಂಧಿಪಟ್ಟವರ ಮೂಲಕ ಮಾಹಿತಿ ನೀಡಬಹುದು ಎಂದು ಉಭಯ ಶ್ರೀಗಳಿಗೆ ಪತ್ರ ಬರೆದು ಮನವಿ ಮಾಡಿದ್ದು, ನಮಗೆ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸವಿದೆ.
ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ನಂತರ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.
.ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಹಿಂದುಳಿದ ವರ್ಗ ಎಂದು ಗುರುತಿಸಿದವರೇ ಮುಖ್ಯಮಂತ್ರಿ ಯಡಿಯೂರಪ್ಪನವರು. ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗಲೂ ಪಂಚಮಸಾಲಿ ಲಿಂಗಾಯತ ಸಮಯದಾಯವನ್ನು ೩ಬಿಗೆ ಸೇರಿಸಿದ್ದರು.
ಈಗ ೨ಎ ಮೀಸಲಾತಿಗೆ ಪ್ರಸ್ತಾವನೆ ಬಂದಿದೆ. ಈ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ಆಯೋಗಕ್ಕೆ ಕಳುಹಿಸಿಕೊಟ್ಟಿದ್ದಾರೆ. ಅಲ್ಲದೆ ಆಯೋಗದ ವರದಿ ಬಂದ ನಂತರ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೆ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಬೊಮ್ಮಾಯಿ ಸಹ ಸಹಕಾರ ನೀಡಿದ್ದಾರೆ ಎಂದು ಸ್ಮರಿಸಿದ್ದಾರೆ.
ನಿವೃತ್ತ ಉಪಲೋಕಾಯುಕ್ತ ನ್ಯಾಯಮೂರ್ತಿ ಸುಭಾಷ್ ಬಿ.ಆಡಿ, ಸರಕಾರದ ನಿವೃತ್ತ ಮುಖ್ಯ ನ್ಯಾಯಮೂರ್ತಿ ರತ್ನಪ್ರಭಾ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ.ಈ ಸಮಿತಿಯು ಕೂಲಂಕಷವಾಗಿ ಅಧ್ಯಯನ ನಡೆಸಿ ವರದಿ ನೀಡಲಿದೆ ಎಂದು ಹೇಳಿದ್ದಾರೆ.
ಸಮಸ್ತ ವೀರಶೈವ- ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಸಿಗಬೇಕು.ಅದರಲ್ಲೂ ಆರ್ಥಿಕವಾಗಿ ತೀರಾ ಹಿಂದುಳಿದ ಹಡಪದ, ಸವಿತಾ ಸಮಾಜದವರು ಸೇರಿದಂತೆ ಧ್ವನಿ ಇಲ್ಲದವರಿಗೆ ಮೀಸಲಾತಿ ಸೌಲಭ್ಯ ಸಿಗಬೇಕು ಎಂದು ನಿರಾಣಿ ಹೇಳಿದ್ದಾರೆ.
ಪಂಚಮಸಾಲಿ ಸಮಾಜ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಔದ್ಯೋಗಿಕವಾಗಿ ಹಿಂದುಳಿದಿದೆ. ಹೀಗಾಗಿ ಸಮಾಜವನ್ನು ಹಿಂದುಳಿದ ವರ್ಗ ೨ಎ ಮೀಸಲಾತಿಗೆ ಒಳಪಡಿಸಲು ಮನವಿ ಮಾಡಲಾಗಿತ್ತು.ಈ ನಿಟ್ಟಿನಲ್ಲಿ ಈ ಬಗ್ಗೆ ಸಮಗ್ರ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿಯವರು ದಿನಾಂಕ: ೫-೨-೨೦೨೧ರಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳರ ಆಯೋಗಕ್ಕೆ ಕೋರಿದ್ದರು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕಾಯ್ದೆ ೧೯೯೫ರ ಅಡಿಯಲ್ಲಿ ಬೇಡಿಕೆಯ ಬಗ್ಗೆ ಸಮಗ್ರವಾಗಿ ನಿಯಮಾನುಸಾರ ಅಧ್ಯಯನ ಮಾಡಿ ವರದಿಯನ್ನು ಸರ್ಕಾರಕ್ಕೆ, ಸಲ್ಲಿಸುವಂತೆ ಪತ್ರದಲ್ಲಿ ಕೋರಲಾಗಿತ್ತು.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

4.4 / 5. 10

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement