ಶಿವಮೊಗ್ಗದಲ್ಲಿ ದಕ್ಷಿಣ ಆಫ್ರಿಕಾ ‘ರೂಪಾಂತರಿ ವೈರಸ್’ ಪತ್ತೆಯಾಗಿಲ್ಲ

 

ಶಿವಮೊಗ್ಗ : ದುಬೈಯಿಂದ ಶಿವಮೊಗ್ಗ ಆಗಮಿಸಿದ್ದ ವ್ಯಕ್ತಿಗೆ ಕೊರೋನಾ ನೆಗಟಿವ್ ವರದಿ ಬಂದಿದ್ದು, ಜಿಲ್ಲೆಯಲ್ಲಿ ದಕ್ಷಿಣ ಆಫ್ರಿಕಾ ಮೂಲಕ ರೂಪಾಂತರಿತ ಕೊರೊನಾ ವೈರಸ್ ಪತ್ತೆಯಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.
ಅವರು ಶುಕ್ರವಾರ ಮೆಗ್ಗಾನ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ದುಬೈಯಿಂದ ಆಗಮಿಸಿದ್ದ ವ್ಯಕ್ತಿಯ ಕೊರೋನಾ ವರದಿ ನೆಗಟಿವ್ ಬಂದಿದ್ದು, ಪ್ರಾಥಮಿಕ ಸಂಪರ್ಕ ಹೊಂದಿರುವ ಎಲ್ಲರ ವರದಿಯೂ ಸಹ ನೆಗಟಿವ್ ಬಂದಿದೆ. ಈ ವ್ಯಕ್ತಿಯೊಂದಿಗೆ ಎರಡನೇ ಹಂತದ ಸಂಪರ್ಕ ಹೊಂದಿದ್ದ 39 ಮಂದಿಯ ತಪಾಸಣೆ ನಡೆಸಲಾಗಿದ್ದು, ಎಲ್ಲರ ವರದಿ ನೆಗೆಟಿವ್ ಇದೆ. ಈ ಹಿನ್ನೆಲೆಯಲ್ಲಿ ಯಾರೂ ಅನಗತ್ಯವಾಗಿ ಭಯಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ನೆರೆಯ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ರಾಜ್ಯದಲ್ಲಿ ಸಹ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸರ್ಕಾರ 1ರಿಂದ 5ನೇ ತರಗತಿ ಮಕ್ಕಳಿಗೆ ಶಾಲೆ ಆರಂಭಿಸಲು ಅನುಮತಿ ನೀಡಿಲ್ಲ. 6ನೇ ತರಗತಿಯಿಂದ ಮೇಲಿನ ವರಿಗೆ ಮಾತ್ರ ಶಾಲೆ ನಡೆಸಲು ಅನುಮತಿ ನೀಡಿದೆ ಎಂದು ಅವರು ಹೇಳಿದರು.

.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement