ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ಎಸ್‌ಐಟಿ ರಚನೆ ‌

ಬೆಂಗಳೂರು; ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ಬಗ್ಗೆ ತನಿಖೆ ನಡೆಸಲು ಅಧಿಕಾರಿಗಳನ್ನು ಹೊಂದಿರುವ ತಂಡ ರಚನೆಯಾಗಿದೆ. ಹಿರಿಯ ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ ಮಾರ್ಗದರ್ಶನದಲ್ಲಿ ಸಿಡಿ ಪ್ರಕರಣದ ತನಿಖೆ ನಡೆಯಲಿದ್ದು, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಆದೇಶದ ಹಿನ್ನೆಲೆಯಲ್ಲಿ ಇದೀಗ ಪೂರ್ಣ ಪ್ರಮಾಣದ “ವಿಶೇಷ ತನಿಖಾ ತಂಡ” ರಚನೆಯಾಗಿದೆ.
ಈ ಬಗ್ಗೆ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕಮಿಷನರ್ ಕಮಲ್ ಪಂತ್ ಐಜಿಪಿ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಸಿಸಿಬಿ ಡಿಸಿಪಿ ಕೆ.ಪಿ. ರವಿಕುಮಾರ್, ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್, ಸಿಸಿಬಿ ಎಸಿಬಿ ಧರ್ಮೇಂದ್ರ, ಸಿಸಿಬಿ ಇನ್‌ಸ್ಪೆಕ್ಟರ್ ಪ್ರಶಾಂತ್ ಬಾಬು, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮಾರುತಿ ಈ ತಂಡದಲ್ಲಿ ಇದ್ದಾರೆ ಎಂದು ತಿಳಿಸಿದರು.
ನಾನು ಕೊಟ್ಟಿರುವ ದೂರು ವಾಪಸು ಪಡೆದಿದ್ದೇನೆ ಎಂದು ಹೇಳುತ್ತಿರುವ ದೂರುದಾರ ದಿನೇಶ್ ಕಲ್ಲಹಳ್ಳಿಯನ್ನು ವಿಚಾರಣೆ ನಡೆಸಲು ತನಿಖಾ ತಂಡ ತೀರ್ಮಾನಿಸಿದೆ. ಕಲ್ಲಹಳ್ಳಿಯನ್ನು ಎಷ್ಟೇ ವಿಚಾರಣೆಗೆ ಒಳಪಡಿಸಿದರೂ ಸಿಡಿ ಮೂಲದ ಬಗ್ಗೆ ಮಾಹಿತಿ ನೀಡಿರಲಿಲ್ಲ. ಹೀಗಾಗಿ ಈ ನಿರ್ಧಾರಕ್ಕೆ ಎಸ್‌ಐಟಿ ಬಂದಿದೆ ಎನ್ನಲಾಗಿದೆ. ಈಗಿರುವ ಎಸ್‌ಐಟಿ ಎಫ್‌ಐಆರ್ ಇಲ್ಲದೆ ತನಿಖೆಯ ನಡೆಸಲಿದೆ. ತನಿಖೆಯಲ್ಲಿ ಬೆಳವಣಿಗೆ ನೋಡಿಕೊಂಡು ಅಗತ್ಯಬಿದ್ದರೆ ಮಾತ್ರ ಎಫ್‌ಐಆರ್‌ ದಾಖಲಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದರು.

ಪ್ರಮುಖ ಸುದ್ದಿ :-   ಆದಿತ್ಯ ಎಲ್‌1, ಪ್ರೋಬಾ-3 ಉಪಗ್ರಹಗಳ ನೆರವಿನಿಂದ ಸೌರ ಸ್ಫೋಟಗಳ ರಹಸ್ಯ ಬಯಲು ಮಾಡಿದ ವಿಜ್ಞಾನಿಗಳು

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement