
ಹಾಸನ: ಸಿಡಿ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ “ನಾನು ಧೈರ್ಯ ಹೇಳಿದ್ದು ನಿಜ. ಒಳ್ಳೆಯದ್ದು ಮತ್ತು ಕೆಟ್ಟದ್ದನ್ನು ದೇವರಿಗೆ ಬಿಡೋಣ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ನಮಗೆ ಮೊದಲು ಮನುಷ್ಯತ್ವ ಬೇಕು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಷ್ಟಪಟ್ಟು ಮೇಲೆ ಬಂದವರು. ಅವರಿಗೆ ನಾನು ಧೈರ್ಯ ಹೇಳಿದ್ದು ನಿಜ ಎಂದು ರೇವಣ್ಣ ಹೇಳಿದ್ದಾರೆ.
ಇಂತಹ ವಿಷಯದಲ್ಲಿ ಯಾರೂ ರಾಜಕೀಯ ಮಾಡಬಾರದು. ಪಕ್ಷ ಯಾವುದೇ ಇರಬಹುದು. ಅದು ಮುಖ್ಯವಲ್ಲ. ಇಲ್ಲಿ ವ್ಯಕ್ತಿ ಹಾಗೂ,ಮನುಷ್ಯತ್ವ ಮುಖ್ಯ. ಅದಕ್ಕಾಗಿಯೇ ಅವರಿಗೆ ನೀವು ಭಯ ಪಡುವ ಅಗತ್ಯವಿಲ್ಲ. ನಿಮ್ಮ ಜೊತೆಗೆ ನಾವೆಲ್ಲ ಇದ್ದೇವೆ ಎಂದು ಧೈರ್ಯ ಹೇಳಿದ್ದೇನೆ ಎಂದು ತಿಳಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ