ವೀರಪ್ಪ ಮೊಯ್ಲಿಯವರ ಮಹಾಕಾವ್ಯ ‘ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ

ನವ ದೆಹಲಿ: 2020ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಪ್ರಕಟಗೊಂಡಿವೆ.
ರಾಜಕಾರಣಿ-ಬರಹಗಾರ ವೀರಪ್ಪ ಮೊಯ್ಲಿ, ಕವಿ ಅರುಂಧತಿ ಸುಬ್ರಮಣಿಯನ್ ಸೇರಿದಂತೆ 20 ಬರಹಗಾರರು 2020ನೇ ಸಾಲಿನ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವೀರಪ್ಪ ಮೊಯ್ಲಿ ಅವರ ಕನ್ನಡದ ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ ಮಹಾಕಾವ್ಯ ಈ ಪ್ರಶಸ್ತಿಗೆ ಆಯ್ಕೆಯಾಗಿದೆ.

ವಿವಿಧ ಭಾಷೆಗಳ ಏಳು ಕವನ ಪುಸ್ತಕಗಳು, ನಾಲ್ಕು ಕಾದಂಬರಿಗಳು, ಐದು ಸಣ್ಣ ಕಥೆಗಳು, ಎರಡು ನಾಟಕಗಳು, ಒಂದು ಆತ್ಮಚರಿತ್ರೆ ಮತ್ತು ಒಂದು ಮಹಾಕಾವ್ಯಕ್ಕೆ ಪ್ರಶಸ್ತಿ ಸಿಕ್ಕಿದೆ.
ಕೇಂದ್ರ ಸಾಹಿತ್ಯ ಅಕಾಡೆಮಿಯ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಇದಾಗಿದೆ. ಅಕಾಡೆಮಿ ಅಧ್ಯಕ್ಷ, ಕನ್ನಡದ ಹಿರಿಯ ಸಾಹಿತಿ ಡಾ. ಚಂದ್ರಶೇಖರ ಕಂಬಾರ ನೇತೃತ್ವದ ಸಮಿತಿ ಒಟ್ಟು 20 ವಿಭಾಗಗಳ ಕೃತಿಗಳನ್ನು ಈ ಪುರಸ್ಕಾರಕ್ಕೆ ಆಯ್ಕೆ ಮಾಡಿದೆ.
ಪ್ರಶಸ್ತಿಯು 1 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನೊಳಗೊಂಡಿದೆ. ಪ್ರಶಸ್ತಿ ಪ್ರದಾನ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement