ಈಡೇರದ ಬೇಡಿಕೆ: ಮಾ.೧೮ರಿಂದ ಮತ್ತೆ ಮುಷ್ಕರಕ್ಕೆ ಸಾರಿಗೆ ನೌಕರರ ನಿರ್ಧಾರ

ಬೆಂಗಳೂರು: ತಮ್ಮ ಬೇಡಿಕೆ ಈಡೇರದ ಕಾರಣ ಸಾರಿಗೆ ನೌಕರರು ಮತ್ತೊಮ್ಮೆ ಮುಷ್ಕರ ನಡೆಸಲು ಮುಂದಾಗಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮಜ್ದೂರ್ ಸಂಘ ಒಕ್ಕೂಟವು ಮಾರ್ಚ್ ೧೮ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ನಿರ್ಧರಿಸಿದ್ದು, ಪ್ರಮುಖ ನಾಲ್ಕು ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ.
ಇಲ್ಲದಿದ್ದರೆ ಮಾ.೧೮ರಂದು ಬೆಂಗಳೂರಿನ ಫ್ರೀಡಂ ಪಾರ್ಕಿಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಈ ಹಿಂದೆ ಮುಷ್ಕರ ನಡೆಸಿದಾಗ ಸರ್ಕಾರ ತಮ್ಮ 9 ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡಿತ್ತು. ಆದರೆ ಇನ್ನೂ ಈಡೇರಿಸಿಲ್ಲ. ಹೀಗಾಗಿ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ. ಸಾವಿರಾರು ನೌಕರರು ಸತ್ಯಾಗ್ರಹದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಲಾಗಿದೆ. ಹೀಗಾಗಿ ರಾಜ್ಯದಲ್ಲಿ ಬಿಎಂಟಿಸಿ, ಕೆಎಸ್‌ಆರ್​​ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement